Home Advertisement
Home ಸಿನಿ ಮಿಲ್ಸ್ ಫಿನಿಕ್ಸ್ ಪ್ರೇಮ್ಸ್ ಸ್ಟುಡಿಯೋಸ್‌ನಿಂದ ಹೊಸ ಪ್ರಯೋಗ – ‘ಇಡಿಯಟ್’

ಫಿನಿಕ್ಸ್ ಪ್ರೇಮ್ಸ್ ಸ್ಟುಡಿಯೋಸ್‌ನಿಂದ ಹೊಸ ಪ್ರಯೋಗ – ‘ಇಡಿಯಟ್’

0
72

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬ್ಯಾನರ್ ಘೋಷಣೆ ಮಾಡಿದ ಬೆನ್ನಲ್ಲೇ ನಿರ್ದೇಶಕ ಜೋಗಿ ಪ್ರೇಮ್ ಮತ್ತು ರಕ್ಷಿತಾ ಪ್ರೇಮ್ ಅವರ ‘ಫಿನಿಕ್ಸ್ ಪ್ರೇಮ್ಸ್ ಸ್ಟುಡಿಯೋಸ್’ ಇದೀಗ ತನ್ನ ಮೊದಲ ಚಿತ್ರದ ಶೀರ್ಷಿಕೆಯನ್ನು ಅಧಿಕೃತವಾಗಿ ಪ್ರಕಟಿಸಿದೆ. ‘ಇಡಿಯಟ್’ (Idiot) ಎಂಬ ಟೈಟಲ್‌ನಡಿ ಈ ಸಿನಿಮಾ ನಿರ್ಮಾಣವಾಗಲಿದ್ದು, ಚಿತ್ರರಂಗದಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

ಗುರುವಿನ ಮೂಲಕ ಶಿಷ್ಯನ ಕನಸು ಸಾಕಾರ : ಫಿನಿಕ್ಸ್ ಪ್ರೇಮ್ಸ್ ಸ್ಟುಡಿಯೋಸ್ ಬ್ಯಾನರ್‌ನ ಮೊದಲ ಚಿತ್ರವನ್ನು ಪ್ರೇಮ್ ಅವರ ಗರಡಿಯಲ್ಲಿ ತರಬೇತಿ ಪಡೆದ ಶಿಷ್ಯ ಮಂಜುನಾಥ್ ಬಿ.ಎಸ್. ನಿರ್ದೇಶಿಸುತ್ತಿದ್ದಾರೆ. ಹಲವು ವರ್ಷಗಳಿಂದ ಸಹ ನಿರ್ದೇಶಕರಾಗಿ ಮತ್ತು ಚಿತ್ರಸಾಹಿತಿಯಾಗಿ ಕೆಲಸ ಮಾಡಿರುವ ಮಂಜುನಾಥ್ ಅವರಿಗೆ ಇದು ನಿರ್ದೇಶಕರಾಗಿ ಮೊದಲ ಅವಕಾಶವಾಗಿದೆ. ಗುರು ಪ್ರೇಮ್ ಅವರ ಬೆಂಬಲದಲ್ಲಿ ಅವರ ಕನಸು ಸಾಕಾರಗೊಳ್ಳುತ್ತಿದೆ.

ತಾಂತ್ರಿಕ ವರ್ಗ: ಚಿತ್ರದಲ್ಲಿ  ‘ಏಕ್ ಲವ್ ಯಾ’ ಖ್ಯಾತಿಯ ಯುವ ನಟ ರಾಣಾ ನಾಯಕನಾಗಿ ಆಯ್ಕೆಯಾಗಿದ್ದು, ಖ್ಯಾತ ಛಾಯಾಗ್ರಾಹಕ ವಿಲಿಯಂ ಡೆವಿಡ್ ಛಾಯಾಗ್ರಹಣ ವಹಿಸಲಿದ್ದಾರೆ. ಸಂಗೀತ ನಿರ್ದೇಶನವನ್ನು ಯುವ ಪ್ರತಿಭೆ ರೋಮಿಯೋ ನಿರ್ವಹಿಸಲಿದ್ದಾರೆ. ಚಿತ್ರಕ್ಕೆ ಸಂಬಂಧಿಸಿದ ಇತರ ತಾಂತ್ರಿಕ ವಿವರಗಳು ಶೀಘ್ರದಲ್ಲೇ ಪ್ರಕಟವಾಗುವ ನಿರೀಕ್ಷೆಯಿದೆ. ಇನ್ನು ಉಳಿದ ಕಲಾವಿದರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ನಾಯಕಿಯ ಬಗ್ಗೆ ಹಾಗೂ ಇತರ ತಾಂತ್ರಿಕ ತಂಡದ ವಿವರಗಳನ್ನು ಚಿತ್ರತಂಡ ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆ ಇದೆ.

‘ಫಿನಿಕ್ಸ್ ಪ್ರೇಮ್ಸ್ ಸ್ಟುಡಿಯೋಸ್’ ಮೂಲಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಉದ್ದೇಶ ಹೊಂದಿರುವ ಪ್ರೇಮ್-ರಕ್ಷಿತಾ ದಂಪತಿ, ಮೊದಲ ಸಿನಿಮಾದಲ್ಲೇ ಹೊಸ ನಿರ್ದೇಶಕ ಮತ್ತು ಯುವ ನಟರನ್ನು ಆಯ್ಕೆ ಮಾಡಿರುವುದು ಗಮನಾರ್ಹ. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಹೊಸ ಮುಖಗಳನ್ನು ಪರಿಚಯಿಸುವ ಪ್ರಯತ್ನ ಮುಂದುವರಿದಿದೆ. ಈ ಚಿತ್ರದ ಶೀರ್ಷಿಕೆ ಮತ್ತು ಫಸ್ಟ್ ಲುಕ್ ಪೋಸ್ಟರ್ ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.

ಚಿತ್ರದ ಚಿತ್ರೀಕರಣ, ಬಿಡುಗಡೆ ದಿನಾಂಕ ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಚಿತ್ರತಂಡ ತಿಳಿಸಿದೆ.