`ಇದ್ರೆ ನೆಮ್ದಿಯಾಗ್ ಇರ್ಬೇಕ್’ ಸಾಂಗ್ ರಿಲೀಸ್: ʻದಿ ಡೆವಿಲ್’ ಬಿಡುಗಡೆಗೆ ಡೇಟ್‌ ಫಿಕ್ಸ್

0
48

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ಅಭಿಮಾನಿಗಳು ಹಲವು ದಿನಗಳಿಂದ ಕುತೂಹಲದಿಂದ ಕಾಯುತ್ತಿದ್ದ ದಿ ಡೆವಿಲ್ ಸಿನಿಮಾದ `ಇದ್ರೆ ನೆಮ್ದಿಯಾಗ್ ಇರ್ಬೇಕ್‌ʼ ಹಾಡು ಕೊನೆಗೂ ಇಂದು ಬಿಡುಗಡೆ ಆಗಿದೆ.

ಈ ಚಿತ್ರದ ಮೊದಲ ಹಾಡು ಆಗಸ್ಟ್ 15ರಂದು ಬಿಡುಗಡೆ ಆಗಬೇಕಿತ್ತು. ದರ್ಶನ್ ಬಂಧನದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಈ ಹಾಡು ಕೊನೆಗೂ ಭಾನುವಾರ ಸಾರೆಗಮ ಕನ್ನಡ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆಯಾಗಿದೆ.

ಹಾಡು ರಿಲೀಸ್‌ ಆದ ಕೇವಲ ಏಳು ಗಂಟೆಗಳಲ್ಲಿಯೇ 5 ಮಿಲಿಯನ್ ವ್ಯೂವ್ಸ್‌ ಪಡೆದುಕೊಂಡಿದೆ. ಇನ್ನು ಸಾಂಗ್‌ ಬಿಡುಗಡೆಯಾಗುತ್ತಿದ್ದಂತೆ ದರ್ಶನ್‌ ಅಭಿಮಾನಿಗಳಿಗೆ ಚಿತ್ರತಂಡ ಸಿನಿಮಾ ಬಿಡುಗಡೆ ಕುರಿತು ಮತ್ತೊಂದು ಸಿಹಿ ಸುದ್ದಿಯನ್ನು ಕೊಟ್ಟಿದೆ.

ಚಿತ್ರದ ಬಗ್ಗೆ ಅಭಿಮಾನಿಗಳು ಕೂಡ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ದರ್ಶನ್‌ ಸದ್ಯ ಜೈಲಿನಲ್ಲಿ ಇದ್ದಾರೆ. ಆದರೆ ತಮ್ಮ ಪಾಲಿನ ಎಲ್ಲ ಕೆಲಸಗಳನ್ನು ಮುಗಿಸಿಕೊಟ್ಟಿದ್ದಾರೆ. ಹೀಗಾಗಿ ಡಿಸೆಂಬರ್‌ನಲ್ಲಿ ಡೆವಿಲ್ ಸಿನಿಮಾ ತೆರೆಗೆ ಬರಲಿದೆ.

ದಿ ಡೆವಿಲ್ ಚಿತ್ರಕ್ಕೆ ಬೆಂಗಳೂರು, ರಾಜಸ್ಥಾನ, ಬ್ಯಾಂಕಾಕ್ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಸುಧಾಕರ್ ಎಸ್. ರಾಜ್ ಛಾಯಾಗ್ರಹಣ ಮತ್ತು ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿರುವ ಈ ಚಿತ್ರದಲ್ಲಿ ದರ್ಶನ್‌ಗೆ ನಾಯಕಿಯಾಗಿ ರಚನಾ ರೈ ಅಭಿನಯಿಸಿದ್ದಾರೆ. ತುಳಸಿ, ಅಚ್ಯುತ್ ಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸ ಪ್ರಭು, ಶೋಭರಾಜ್ ಮುಂತಾದವರು ನಟಿಸಿದ್ದಾರೆ.

ಡಿಸೆಂಬರ್‌ 12ರಂದು ಬೆಳ್ಳಿತೆರೆಗೆ: ‘ದಿ ಡೆವಿಲ್’ ಸಿನಿಮಾ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಪ್ರಕಟಿಸಿದೆ. ಇದೇ ವರ್ಷ ಡಿಸೆಂಬರ್ 12ರಂದು ‘ದಿ ಡೆವಿಲ್’ ಚಿತ್ರ ಅದ್ದೂರಿಯಾಗಿ ತೆರೆಕಾಣಲಿದೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಚಿತ್ರ ತಂಡ “ನಲ್ಮೆಯ ಸೆಲೆಬ್ರಿಟೀಸ್, ನಿಮ್ಮ ನಿರಂತರ ಪ್ರಾರ್ಥನೆ, ಪ್ರೀತಿ ಮತ್ತು ಬೆಂಬಲಕ್ಕೆ ಅನಂತ ಧನ್ಯವಾದಗಳು. ನೀವು ಕಾತುರದಿಂದ ಕಾಯುತ್ತಿದ್ದ #TheDevil ಡಿಸೆಂಬರ್ 12 ರಂದು ಬಿಡುಗಡೆಯಾಗಲಿದೆ.” ಎಂದು ತಿಳಿಸಿದೆ.

ಸದ್ಯ ದರ್ಶನ್ ಜೈಲಿನಲ್ಲಿರುವಾಗಲೇ ʻದಿ ಡೆವಿಲ್ʼ ಮೊದಲ ಸಾಂಗ್ ಬಿಡುಗಡೆಯಾಗಿದ್ದು, ಅದ್ಧೂರಿಯಾಗಿಯೇ ಅಭಿಮಾನಿಗಳು ಬರಮಾಡಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾ, ಯೂಟ್ಯೂಬ್‌ನಲ್ಲಿಯೂ ಹಾಡು ಫುಲ್ ಟ್ರೆಂಡಿಂಗ್‌ನಲ್ಲಿದೆ.

ಶ್ರೀ ಜೈಮಾತಾ ಕಂಬೈನ್ಸ್ ಹಾಗೂ ಸಾರೆಗಮ ಪ್ರೊಡಕ್ಷನ್ಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿದ್ದು, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ.

Previous articleಶಿವಮೊಗ್ಗ: ತಾನೇ ಹೆರಿಗೆ ಮಾಡಿಕೊಂಡು ಮಗುವಿನ ಕತ್ತು ಕೊಯ್ದ ಮಹಾತಾಯಿ
Next articleಡಿಜೆ ನಿರ್ಬಂಧ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್‌ನಲ್ಲಿ ವಜಾ

LEAVE A REPLY

Please enter your comment!
Please enter your name here