SK Home Ad
Home ಸಿನಿ ಮಿಲ್ಸ್ ಕವಿತಾ ಲಂಕೇಶ್ ಪುತ್ರಿ ಇಶಾ ಲಂಕೇಶ್ ಚಿತ್ರರಂಗಕ್ಕೆ ಎಂಟ್ರಿ

ಕವಿತಾ ಲಂಕೇಶ್ ಪುತ್ರಿ ಇಶಾ ಲಂಕೇಶ್ ಚಿತ್ರರಂಗಕ್ಕೆ ಎಂಟ್ರಿ

0
85

ಬೆಂಗಳೂರು: ಪ್ರಸಿದ್ಧ ಲೇಖಕ, ಪತ್ರಕರ್ತ ಪಿ.ಲಂಕೇಶ್ ಮೊಮ್ಮಗಳು, ನಿರ್ದೇಶಕಿ ಕವಿತಾ ಲಂಕೇಶ್ ಪುತ್ರಿ ಇಶಾ ಲಂಕೇಶ್ ನಾಯಕಿಯಾಗಿ ಕನ್ನಡ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಲಂಕೇಶ್ ಕುಟುಂಬದ ಮೂರನೇ ತಲೆಮಾರಿನ ಮತ್ತೊಂದು ಕುಡಿ ಬಣ್ಣದ ಲೋಕಕ್ಕೆ ಅಡಿಯಿಡುತ್ತಿದ್ದಾರೆ.

ಖ್ಯಾತ ನಿರ್ದೇಶಕ ಪ್ರೀತಂ ಗುಬ್ಬಿ ಈ ಚಿತ್ರವನ್ನು ನಿರ್ದೇಶಿಸಲಿದ್ದು, ನವಿಶಾ ಫಿಲಂಸ್ ಬ್ಯಾನರ್ ಅಡಿಯಲ್ಲಿ ಶಿವರಾಜ್ ಕನಗನಪಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇದು ಈ ಸಂಸ್ಥೆ ನಿರ್ಮಿಸುತ್ತಿರುವ ಎರಡನೇ ಸಿನಿಮಾ.

ಈಗಾಗಲೇ ರಂಗಭೂಮಿಯಲ್ಲಿ ಸಾಕಷ್ಟು ಹೆಸರು ಮಾಡಿರುವ ಇಶಾ ಲಂಕೇಶ್, ನಟನೆಗೆ ಬೇಕಾಗಿರುವ ಪೂರ್ವ ತಯಾರಿಗಳನ್ನು ಮಾಡಿಕೊಂಡು ಚಂದನವನಕ್ಕೆ ಅಡಿಯಿಟ್ಟಿದ್ದಾರೆ. ಸದ್ಯ ಇನ್ನೂ ಹೆಸರಿಡದ ಈ ನೂತನ ಚಿತ್ರದ ಮತ್ತಷ್ಟು ಮಾಹಿತಿಯನ್ನು ಸದ್ಯದಲ್ಲೇ ಚಿತ್ರತಂಡ ಹಂಚಿಕೊಳ್ಳಲಿದೆಯಂತೆ.