KDಯ ಜೋಡೆತ್ತು ಹಾಡಿಗೆ ಜೋಗಿ ಪ್ರೇಮ್ ಗಾನ ಬಜಾನ

0
3

ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಕೆಡಿ – ಕಾಳಿದಾಸ’ ಚಿತ್ರದ ಮೂರನೇ ಹಾಡು ‘ಅಣ್ತಮ್ಮ ಜೋಡೆತ್ತು ಕಣೋ’ ಅಧಿಕೃತವಾಗಿ ಬಿಡುಗಡೆಯಾಗಿದೆ. ಈ ವಿಚಾರವನ್ನು ಚಿತ್ರದ ನಿರ್ದೇಶಕ ಜೋಗಿ ಪ್ರೇಮ್ ಅವರು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ.

ಈ ಹಾಡನ್ನು ಬಹುಭಾಷೆಗಳಲ್ಲಿ ಬಿಡುಗಡೆ ಮಾಡಲಾಗಿದ್ದು, ಈಗಾಗಲೇ ಸಂಗೀತ ಪ್ರಿಯರ ಗಮನ ಸೆಳೆಯತೊಡಗಿದೆ. ‘ಕೆಡಿ’ ಚಿತ್ರದ ಮೊದಲ ಹಾಡು ‘ಶಿವ ಶಿವ’ ಬಿಡುಗಡೆಗೊಂಡು ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಇದಾದ ಬಳಿಕ ಬಿಡುಗಡೆಯಾದ ‘ಸೆಟ್ಟಾಗಲ್ಲ ಹೋಗೆ’ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿ, ಚಿತ್ರದ ಮೇಲಿನ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸಿತ್ತು. ಇದೀಗ ಮೂರನೇ ಹಾಡು ‘ಅಣ್ತಮ್ಮ ಜೋಡೆತ್ತು ಕಣೋ’ ಸಹ ಅದೇ ಮಟ್ಟದ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಚಿತ್ರದುರ್ಗ ಬಸ್‌ ಅಪಘಾತ ಪ್ರಕರಣ : ಬದುಕುಳಿಯದ ಬಸ್ ಚಾಲಕ

KD ಚಿತ್ರ ಬಿಡುಗಡೆ ದಿನಾಂಕ ಘೋಷಣೆ: ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಈ ಹಾಡಿನಲ್ಲಿ ಘೋಷಿದ್ದು 2026ರ ಏಪ್ರಿಲ್ ತಿಂಗಳ ಕೊನೆಯಲ್ಲಿ ಬಿಡುಗಡೆಯಾಗಿದೆ, ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ‘ಕೆಡಿ’ ಸಿನಿಮಾ ತೆರೆಕಾಣಲಿದೆ. ಈಗಾಗಲೇ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಭಾರೀ ನಿರೀಕ್ಷೆ ಹುಟ್ಟಿಸಿದೆ.

ಈ ಸಿನಿಮಾದ ಮತ್ತೊಂದು ವಿಶೇಷವೆಂದರೆ, ಕಿಚ್ಚ ಸುದೀಪ್ ಅವರು ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿರುವುದು. ‘ಏಕ್ ಲವ್ ಯಾ’ ಚಿತ್ರದ ಬಳಿಕ ನಿರ್ದೇಶಕ ಜೋಗಿ ಪ್ರೇಮ್ ಕೈಗೊಂಡಿರುವ ಈ ಸಿನಿಮಾ, ಅವರ ಮಹತ್ವಾಕಾಂಕ್ಷೆಯ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಆಗಿದೆ.

ಚಿತ್ರದಲ್ಲಿ ಧ್ರುವ ಸರ್ಜಾ ಜೊತೆಗೆ ರೀಷ್ಮಾ ನಾಣಯ್ಯ, ಸಂಜಯ್ ದತ್, ರವಿಚಂದ್ರನ್, ಶಿಲ್ಪಾ ಶೆಟ್ಟಿ, ರಮೇಶ್ ಅರವಿಂದ್ ಸೇರಿದಂತೆ ಭಾರೀ ತಾರಾಬಳಗ ಕಾಣಿಸಿಕೊಳ್ಳುತ್ತಿದೆ. ‘KD – ಕಾಳಿದಾಸ’ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಾಣ ಮಾಡಿದೆ.

ಇದನ್ನೂ ಓದಿ: ಮೈಸೂರು ಅರಮನೆ ಮುಂಭಾಗ ಗ್ಯಾಸ್ ಸಿಲಿಂಡರ್ ಸ್ಫೋಟ: ಓರ್ವ ಸಾವು, ಹಲವರಿಗೆ ಗಂಭೀರ ಗಾಯ

ಈ ಸಿನಿಮಾ 1970–75ರ ಅವಧಿಯಲ್ಲಿ ನಡೆದ ನೈಜ ಘಟನೆಗಳ ಆಧಾರಿತ ಗ್ಯಾಂಗ್‌ಸ್ಟರ್ ಕಥೆಯನ್ನೊಳಗೊಂಡಿದೆ. ಚಿತ್ರಕ್ಕಾಗಿ ಸುಮಾರು 180 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದ್ದು, ಚಿತ್ರದ ಹಿನ್ನೆಲೆ ಸಂಗೀತ (ಬ್ಯಾಂಡ್ ಸ್ಕೋರ್) ಕೆಲಸವನ್ನು ಹಂಗರಿ ರಾಜಧಾನಿ ಬುಡಾಪೆಸ್ಟ್‌ನಲ್ಲಿ ಪೂರ್ಣಗೊಳಿಸಲಾಗಿದೆ.

ಒಟ್ಟಾರೆ, ಹಾಡುಗಳ ಮೂಲಕವೇ ಭಾರೀ ಸದ್ದು ಮಾಡುತ್ತಿರುವ ‘ಕೆಡಿ’ ಸಿನಿಮಾ ಬಿಡುಗಡೆಗೂ ಮುನ್ನವೇ ಸಿನಿಪ್ರಿಯರಲ್ಲಿ ಕುತೂಹಲ ಮತ್ತು ನಿರೀಕ್ಷೆಯನ್ನು ಗರಿಷ್ಠ ಮಟ್ಟಕ್ಕೆ ಕೊಂಡೊಯ್ದಿದೆ.

Previous articleಚಿಕ್ಕಬಳ್ಳಾಪುರ ಟಿಪ್ಪರ್–ಬೈಕ್ ಅಪಘಾತದಲ್ಲಿ ನಾಲ್ವರು ಸಾವು: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ