Home ಸಿನಿ ಮಿಲ್ಸ್ ಕನ್ನಡ ಚಿತ್ರರಂಗಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಂಟ್ರಿ

ಕನ್ನಡ ಚಿತ್ರರಂಗಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಂಟ್ರಿ

0

ಕನ್ನಡ ಚಿತ್ರರಂಗಕ್ಕೆ ಕಾಂಗ್ರೆಸ್ ನಾಯಕಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪಾದಾರ್ಪಣೆ ಮಾಡಲಿದ್ದಾರೆ. ಹೌದು ಸದ್ಯದ ಮಾಹಿತಿ ಪ್ರಕಾರ ನಿರ್ಮಾಪಕಿಯಾಗಿ ಅವರು ಚಿತ್ರಗಳನ್ನು ನಿರ್ಮಾಣ ಮಾಡಲಿದ್ದಾರೆ.

ಶುಕ್ರವಾರ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎರಡು ಕನ್ನಡ ಚಿತ್ರಗಳನ್ನು ನಿರ್ಮಾಣ ಮಾಡುತ್ತಿದ್ದಾರೆ.

‘ಐರಾ’ ಎಂಬ ಚಿತ್ರ ನಿರ್ಮಾಣ ಸಂಸ್ಥೆಯನ್ನು ಪ್ರಾರಂಭಿಸುವ ಮೂಲಕ ಲಕ್ಷ್ಮೀ ಹೆಬ್ಬಾಳಕರ್ ನಿರ್ಮಾಪಕಿಯಾಗುತ್ತಿದ್ದಾರೆ. ಎರಡೂ ಚಿತ್ರಗಳಿಗೆ ಈಗಾಗಲೇ ನಾಯಕರು ಸಹ ಅಂತಿಮಗೊಂಡಿದ್ದಾರೆ.

ಲಕ್ಷ್ಮೀ ಹೆಬ್ಬಾಳಕರ್ ನಿರ್ಮಾಣ ಮಾಡುವ ಮೊದಲ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಮತ್ತೊಂದು ಚಿತ್ರದಲ್ಲಿ ರಮೇಶ್ ಅರವಿಂದ್ ನಾಯಕರಾಗಿ ನಟಿಸಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

“ನಾವು ಎರಡು ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದ್ದೇವೆ. ಉತ್ತರ ಮತ್ತು ದಕ್ಷಿಣ ಕರ್ನಾಟಕದ ಕಲಾವಿದರಿಗೆ ಅವಕಾಶ ನೀಡಲಾಗುತ್ತದೆ. ಹೆಚ್ಚಿನ ವಿವರಗಳನ್ನು ಶೀಘ್ರದಲ್ಲಿಯೇ ಹಂಚಿಕೊಳ್ಳುತ್ತೇವೆ” ಎಂದು ಸಚಿವೆ ಹೇಳಿದ್ದಾರೆ ಎಂದು ಪೋಸ್ಟ್‌ನಲ್ಲಿ ತಿಳಿಸಲಾಗಿದೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ ಭಾಗದ ಪ್ರಭಾವಿ ಕಾಂಗ್ರೆಸ್ ನಾಯಕಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು.

ಲಕ್ಷ್ಮೀ ಹೆಬ್ಬಾಳಕರ್ ಸಹೋದರ ಚನ್ನರಾಜ ಹಟ್ಟಿಹೊಳಿ ಸಹ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಅವರು ಹಾಲಿ ವಿಧಾನ ಪರಿಷತ್ ಸದಸ್ಯರು. ಲಕ್ಷ್ಮೀ ಹೆಬ್ಬಾಳಕರ್ ಪುತ್ರ ಮೃಣಾಲ್ ಹೆಬ್ಬಾಳಕರ್ ಸಹ ಕಾಂಗ್ರೆಸ್‌ನಲ್ಲಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಲ್ಲಿ ಚುನಾವಣಾ ಕಣಕ್ಕಿಳಿದು ಅವರು ಸೋಲು ಕಂಡಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version