ಹೈದರಾಬಾದ್: ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ (85) ವಯೋ ಸಹಜ ಕಾಯಿಲೆಯಿಂದ ಸೋಮವಾರ ನಿಧನರಾದರು.
ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಹೈದರಾಬಾದ್‌ನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಗದಗ ಮೂಲದವರಾದ ಸ್ವರ್ಣಲತಾ ಚಿಕ್ಕವಯಸ್ಸಿನಲ್ಲಿಯೇ ತಾಯಿಯನ್ನು ಕಳೆದುಕೊಂಡು ಅನಾಥಾಶ್ರಾಮದಲ್ಲಿ ಬೆಳೆದರು. ಬಳಿಕ ಬೆಂಗಳೂರಿಗೆ ಬಂದು ನೆಲೆಸಿದರು. ಮಂಜುನಾಥ್ ರೈ ಜತೆ ಮದುವೆಯಾಗಿ ಅವರಿಗೆ ಮೂವರು ಮಕ್ಕಳಿದ್ದಾರೆ. ನಟ ಪ್ರಕಾಶ್ ರಾಜ್ ಹಿರಿಯ ಮಗನಾಗಿದ್ದಾರೆ.






















