ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್‌ಗೆ ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಭಾರಿ ಆಘಾತ ತಟ್ಟಿದೆ. ಅಕ್ರಮವಾಗಿ 127 ಕೆ.ಜಿ. ಚಿನ್ನ ಸಾಗಾಣಿಕೆ ಸಾಬೀತಾದ ಹಿನ್ನೆಲೆಯಲ್ಲಿ ಡೈರೆಕ್ಟರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ (DRI) 102.55 ಕೋಟಿ ರೂಪಾಯಿ ದಂಡ ಪಾವತಿಸಲು ನೋಟಿಸ್ ನೀಡಿದೆ.
ಈ ಪ್ರಕರಣದಲ್ಲಿ ರನ್ಯಾ ರಾವ್ ಸೇರಿದಂತೆ ನಾಲ್ವರು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಎನ್ಫೋರ್ಸ್‌ಮೆಂಟ್ ಡೈರೆಕ್ಟರೇಟ್ (ED) 37 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆಸ್ತಿಗಳನ್ನು ಜಪ್ತಿ ಮಾಡಿತ್ತು. ಇದೀಗ ಡಿಆರ್‌ಐ ನೋಟಿಸ್ ಹಿನ್ನೆಲೆಯಲ್ಲಿ ನಟಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಆಸ್ತಿ ಮುಟ್ಟುಗೋಲು ಸಾಧ್ಯತೆ: ದಂಡ ಪಾವತಿಸದಿದ್ದರೆ ಆರೋಪಿಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಡಿಆರ್‌ಐಗೆ ಅಧಿಕಾರವಿದೆ. ಪ್ರಕರಣದಲ್ಲಿ ಎ2 ಆರೋಪಿ ತರುಣ್ ಕೊಂಡುರು ರಾಜು 67.6 ಕೆ.ಜಿ. ಚಿನ್ನ ಕಳ್ಳಸಾಗಣೆ ಮಾಡಿರುವುದು ದೃಢಪಟ್ಟಿದ್ದು, ಅವನಿಗೆ 62 ಕೋಟಿ ದಂಡ ವಿಧಿಸಲಾಗಿದೆ. ಸಾಹಿಲ್ ಜೈನ್ ಮತ್ತು ಭರತ್ ಜೈನ್ ತಲಾ 63.61 ಕೆ.ಜಿ. ಚಿನ್ನ ಸಾಗಾಣಿಕೆ ನಡೆಸಿರುವುದು ಸಾಬೀತಾಗಿದ್ದು, ಇವರಿಗೆ ತಲಾ 53 ಕೋಟಿ ದಂಡ ಪಾವತಿಸಲು ಸೂಚಿಸಲಾಗಿದೆ.
ಕೋರ್ಟ್ ವಿಚಾರಣೆ ಮುಂದೂಡಿಕೆ: ರನ್ಯಾ ರಾವ್ ಸಂಬಂಧಿತ ಕಾಫಿಪೋಸಾ ಅರ್ಜಿ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬಂದಿದ್ದು, ಪ್ರಕರಣದ ವಿಚಾರಣೆ ಸೆಪ್ಟೆಂಬರ್ 11ಕ್ಕೆ ಮುಂದೂಡಲಾಗಿದೆ.