SK Home Ad
Home ಸಿನಿ ಮಿಲ್ಸ್ ಕ್ರಿಸ್‌ಮಸ್‌ಗೆ ಮೆಕ್ಸಿಕೋ ಅಣ್ಣನ ಎಂಟ್ರಿ

ಕ್ರಿಸ್‌ಮಸ್‌ಗೆ ಮೆಕ್ಸಿಕೋ ಅಣ್ಣನ ಎಂಟ್ರಿ

0
50

ಡಾಲಿ ಧನಂಜಯ್ ಅಭಿನಯದ ಬಹುನಿರೀಕ್ಷಿತ ಅಣ್ಣ ಫ್ರಮ್ ಮೆಕ್ಸಿಕೋ ಸಿನಿಮಾದ ಬಿಡುಗಡೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ. ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಾಲು ಸಾಲು ರಜಾ ದಿನಗಳ ಸಂಭ್ರಮವನ್ನು ಚಿತ್ರತಂಡ ಸದುಪಯೋಗಪಡಿಸಿಕೊಳ್ಳಲು ಮುಂದಾಗಿದೆ. ಹೀಗಾಗಿ ಡಿಸೆಂಬರ್ 24ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಾಣಲು ಮುಹೂರ್ತ ನಿಗದಿಪಡಿಸಿದೆ.

2021ರ ಡಿಸೆಂಬರ್ ತಿಂಗಳಲ್ಲಿ ಬಿಡುಗಡೆಯಾಗಿ ಬಾಕ್ಸಾಫೀಸ್‌ನಲ್ಲಿ ಸೂಪರ್ ಹಿಟ್ ಆಗಿದ್ದ ಬಡವ ರಾಸ್ಕಲ್ ಸಿನಿಮಾದ ಜೋಡಿ, ಬರೋಬ್ಬರಿ ಐದು ವರ್ಷಗಳ ಬಳಿಕ ಮತ್ತೆ ಒಂದಾಗಿರೋದು ವಿಶೇಷ. ಬಡವ ರಾಸ್ಕಲ್' ಮೂಲಕವೇ ಧನಂಜಯ್ಡಾಲಿ ಪಿಕ್ಚರ್ಸ್’ ಬ್ಯಾನರ್ ಅಡಿಯಲ್ಲಿ ನಿರ್ಮಾಪಕರಾಗಿಯೂ ಯಶಸ್ಸು ಕಂಡಿದ್ದರು. ಆ ಚಿತ್ರವನ್ನು ನಿರ್ದೇಶಿಸಿದ್ದ ಶಂಕರ್ ಗುರು, ಇದೀಗ ಎರಡನೇ ಬಾರಿಗೆ ಧನಂಜಯ್‌ಗೆ ಆಕ್ಷನ್ ಕಟ್ ಹೇಳಿದ್ದಾರೆ.

ಫ್ಯಾಮಿಲಿ ಎಂಟರ್ಟೈನ್ಮೆಂಟ್ ಜೊತೆಗೆ ಆ್ಯಕ್ಷನ್ ಎಲಿಮೆಂಟ್ಸ್ ಹೊಂದಿರುವ ಈ ಸಿನಿಮಾದಲ್ಲಿ ಧನಂಜಯ್‌ಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ಇದ್ದಾರೆ. ರಂಗಾಯಣ ರಘು, ನಾಗಭೂಷಣ ಹಾಗೂ ಪೂರ್ಣಚಂದ್ರ ಮೈಸೂರು ಸೇರಿದಂತೆ ಅನೇಕ ಕಲಾವದರ ದಂಡೇ ಈ ಚಿತ್ರದಲ್ಲಿದೆ. ಲೂಸ್ ಮಾದ ಯೋಗಿ ಈ ಚಿತ್ರದ ವಿಶೇಷ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

ಐರಾ ಫಿಲಂಸ್ ಹಾಗೂ ರಾಯಲ್‌ ಸ್ಟುಡಿಯೋಸ್ ಬ್ಯಾನರ್‌ನಡಿ ಈ ಸಿನಿಮಾ ನಿರ್ಮಾಣವಾಗಿದೆ. ವಾಸುಕಿ ವೈಭವ್ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.