ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

0
46

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು 57ನೇ ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ.

ಜಾಮೀನು ತೆಗೆದುಕೊಂಡು ಹೊರಬಂದಿದ್ದ ಪವಿತ್ರಾ ಗೌಡ ಸೇರಿ ಏಳು ಜನ ಆರೋಪಿಗಳಿಗೆ ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ರದ್ದಾಗಿತ್ತು. ಅಲ್ಲದೇ ಯಾವುದೇ ಕಾರಣಕ್ಕೂ ಬೇಲ್ ಬೇಡ ಎಂದು ಸರ್ಕಾರಿ ವಕೀಲರು ವಾದಿಸಿದ್ದರು. ಇದರಿಂದಾಗಿ ಸದ್ಯ ಪರಪ್ಪನ ಅಗ್ರಹಾರ ಜೈಲು ಸೇರಿರುವ ಪವಿತ್ರಾ ಗೌಡ ಮತ್ತೇ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.

ತಾಂತ್ರಿಕ ಕಾರಣ ನೀಡಿ ಜಾಮೀನು ಅರ್ಜಿ ಸಲ್ಲಿಸಿದ್ದ ಪವಿತ್ರಾ ಗೌಡ ಪರ ವಕೀಲರು ಪವಿತ್ರಗೌಡ ವಿರುದ್ಧ ಆರೋಪ ಪಟ್ಟಿಯನ್ನು ಬಿಎನ್‌ಎಸ್ ಬದಲು ಸಿಆರ್‌ಪಿಸಿ ಅಡಿಯಲ್ಲಿ ಸಲ್ಲಿಕೆ ಮಾಡಿದ್ದಾರೆ. ಇದು ಕಾನೂನು ಬಾಹಿರವಾಗಿದೆ. ನಮ್ಮ ಕಕ್ಷಿದಾರರು ಕಡ್ಡಾಯ ಜಾಮೀನಿಗೆ ಅರ್ಹರು ಎಂದು ವಾದ ಮಂಡಿಸಿದ್ದರು.

ಆ. 30ರಂದು ಸೆಷನ್ಸ್ ಕೋರ್ಟ್ ವಿಚಾರಣೆ ನಡೆಸಿತ್ತು. ವಾದ-ಪ್ರತಿವಾದಗಳನ್ನು ಆಲಿಸಿದ್ದ ನ್ಯಾಯಾಲಯ ಸೆ. 2ಕ್ಕೆ ಆದೇಶ ಕಾಯ್ದಿರಿಸಿತ್ತು. ಸದ್ಯ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

Previous articleಕರ್ನಾಟಕ: 2ನೇ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ, ಬಿಜೆಪಿ ಪ್ರಶ್ನೆಗಳು
Next articleಕಲಬುರಗಿ: ಕೇಂದ್ರ ಸರ್ಕಾರ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡಲಿ – ಮಠಾಧೀಶರ ಒತ್ತಾಯ

LEAVE A REPLY

Please enter your comment!
Please enter your name here