Home Advertisement
Home ಸಿನಿ ಮಿಲ್ಸ್ ಸ್ಯಾಂಡಲ್‌ವುಡ್‌ನ ಹಿರಿಯ ನಟ ಉಮೇಶ್ ಇನ್ನಿಲ್ಲ

ಸ್ಯಾಂಡಲ್‌ವುಡ್‌ನ ಹಿರಿಯ ನಟ ಉಮೇಶ್ ಇನ್ನಿಲ್ಲ

1
103

ಬೆಂಗಳೂರು: ಸ್ಯಾಂಡಲ್‌ವುಡ್‌ನ ಹಿರಿಯ ನಟ ಎಂ.ಎಸ್ ಉಮೇಶ್ (80) ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಅನಾರೋಗ್ಯದಿಂದಾಗಿ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದ ಉಮೇಶ್ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದರು.

ಕೆಲ ದಿನಗಳ ಹಿಂದೆಯಷ್ಟೇ ಮನೆಯಲ್ಲಿ ಜಾರಿಬಿದ್ದಿದ್ದ ಉಮೇಶ್‌ ಅವರಿಗೆ ಕಾಲು ಮತ್ತು ಸೊಂಟಕ್ಕೆ ಪೆಟ್ಟು ಆಗುತ್ತು. ಇದಕ್ಕಾಗಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇದೇ ವೇಳೆ ಅವರಿಗೆ 4ನೇ ಹಂತದ ಲಿವರ್‌ ಕ್ಯಾನ್ಸರ್‌ ಇರುವುದು ಪತ್ತೆಯಾಗಿತ್ತು.

1 COMMENT

LEAVE A REPLY

Please enter your comment!
Please enter your name here