ಮುಂಬೈ: ಬಾಲಿವುಡ್‌ನ ಎವರ್‌ಗ್ರೀನ್ ಸ್ಟಾರ್, ಹಿರಿಯ ನಟ ಧರ್ಮೇಂದ್ರ (89) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ಕೆಲ ದಿನಗಳಿಂದ ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಬೆಳಿಗ್ಗೆ ಮತ್ತಷ್ಟು ಆರೋಗ್ಯ ಹದಗೆಟ್ಟಿದ್ದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
1960ರಲ್ಲಿ ʻದಿಲ್ ಭೀ ತೇರಾ ಹಮ್ ಭೀ ತೇರೆʼ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ್ದ ಧರ್ಮೇಂದ್ರ ಅವರು, ಅನೇಕ ಚಲನಚಿತ್ರಗಳಲ್ಲಿ ನಟಿಸಿ ತಮ್ಮ ಛಾಪನ್ನು ಮೂಡಿಸಿದ್ದಾರೆ.
