ಮಲೆನಾಡಲ್ಲಿ ಮಂಗನಕಾಯಿಲೆ ಪತ್ತೆ: ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

0
27
ಮಂಗನ ಕಾಯಿಲೆ

ಚಿಕ್ಕಮಗಳೂರು : ಮಲೆನಾಡಲ್ಲಿ ಈ ವರ್ಷದ ಮೊದಲ‌ ಕೆಎಫ್‌ಡಿ (ಮಂಗನಕಾಯಿಲೆ) ಪತ್ತೆಯಾಗಿದೆ. ಹೌದು, ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಮೂಲದ ವ್ಯಕ್ತಿಯಲ್ಲಿ ಕೆಎಫ್‌ಡಿ ಪತ್ತೆಯಾಗಿದೆ. ಇದರಿಂದಾಗಿ ಮಲೆನಾಡಿನಲ್ಲಿ ಮತ್ತೆ ಮಂಗನಕಾಯಿಲೆ ಭೀತಿ ಆವರಿಸಿದೆ. ಹೀಗಾಗಿ ಜಿಲ್ಲಾದ್ಯಂತ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್ ಆಗಿದೆ.
ಕೊಪ್ಪದಲ್ಲಿದ್ದ ಕೆಲಸ ಮಾಡುತ್ತಿದ್ದ ವ್ಯಕ್ತಿಯಲ್ಲಿ ಮಂಗನಕಾಯಿಲೆ ಪತ್ತೆಯಾಗಿದೆ. ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಅರೋಗ್ಯ ಇಲಾಖೆ ಟಿಕ್ಸ್ ಕಳುಹಿಸಿತ್ತು. ಇದೀಗ ವ್ಯಕ್ತಿಯಲ್ಲಿ ಕೆಎಫ್‌ಡಿ ಪತ್ತೆಯಾಗಿದ್ದು ದೃಢಪಟ್ಟಿದೆ.

Previous articleನಿಷೇಧದ ನಡುವೆಯೂ ಹೈದರಾಬಾದ್ ವಿವಿಯಲ್ಲಿ ಮೋದಿ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ
Next articleಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ಏರೊ ಇಂಡಿಯಾ ಶೋ