Home ಆರೋಗ್ಯ ಹೆಚ್​​3ಎನ್​​2 ವೈರಸ್​ ಗೆ ರಾಜ್ಯದಲ್ಲಿ ಮೊದಲ ಬಲಿ

ಹೆಚ್​​3ಎನ್​​2 ವೈರಸ್​ ಗೆ ರಾಜ್ಯದಲ್ಲಿ ಮೊದಲ ಬಲಿ

0
H3N2

ಹಾಸನ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಎಚ್‌ 1 ಎನ್‌ 1 ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚಾಗುತ್ತಿದ್ದು, ಇದರ ಜೊತೆಗೆ ಎಚ್‌3 ಎನ್‌2 ಪ್ರಕರಣಗಳು ಕೂಡ ಹೆಚ್ಚಾಗುತ್ತಲೇ ಇವೆ. ಈ ಬೆನ್ನಲ್ಲೇ ಇದೀಗ ಹಾಸನ ಜಿಲ್ಲೆಯಲ್ಲಿ H3N2ಗೆ ಮೊದಲ ಬಲಿ ಆಗಿರುವ ಪ್ರಕರಣ ದಾಖಲಾಗಿದೆ. ಮೃತ ವ್ಯಕ್ತಿಯ ಗ್ರಾಮದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಆರೋಗ್ಯ ತಪಾಸಣೆ ಭರದಿಂದ ಸಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಇಲಾಖೆ ತಪಾಸಣೆ ನಡೆಸಲು ಮುಂದಾಗಿದೆ. ಅನಾರೋಗ್ಯ ಪೀಡಿತ ಜನರು ಹಾಗೂ ವೃದ್ಧರನ್ನ ಕೂಡ ಪರೀಕ್ಷೆ ನಡೆಸಲಾಗಿದೆ ಎಂದು ಡಿಎಚ್‌ಓ ಡಾ.ಶಿವಸ್ವಾಮಿ ಮಾಹಿತಿ ನೀಡಿದ್ದಾರೆ.

Exit mobile version