ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಂಗ್ರೆಸ್ ಪಕ್ಷ ಕೇವಲ ಹೆಸರಿಗೆ ಮಾತ್ರ ಅಧಿಕಾರವನ್ನು ನೀಡಿದೆಯಾ? ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರಶ್ನಿಸಿದ್ದಾರೆ.
ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ ನಿರ್ಧಾರ ಎಂಬ ಮಲ್ಲಿಕಾರ್ಜುನ ಖರ್ಗೆ ಅವರ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಪೋಸ್ಟ್ ಮಾಡಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ ಕೈಯಲ್ಲಿ ಇದೆ. ನಮಗೇನೂ ಗೊತ್ತಾಗೊದಿಲ್ಲ.” ಇಂತಹ ಮಾತನ್ನು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಮಾತನಾಡಿರುವುದು ಕಾಂಗ್ರೆಸ್ ಪಕ್ಷ ಅವರನ್ನು ನಡೆಸಿಕೊಳ್ಳುವ ರೀತಿಯನ್ನು ಪ್ರದರ್ಶಿಸಿದೆ. ಕಾಂಗ್ರೆಸ್ ಪಕ್ಷ ಕೇವಲ ಹೆಸರಿಗೆ ಮಾತ್ರ ಅಧಿಕಾರವನ್ನು ಖರ್ಗೆಯವರಿಗೆ ನೀಡಿದೆಯಾ? ಅವರಿಗೆ ಯಾವುದೇ ತೀರ್ಮಾನ ತೆಗೆದುಕೊಳ್ಳುವ ಅಧಿಕಾರವನ್ನು ನೀಡದೇ ಕೈಗೊಂಬೆಯಂತೆ ಕಾಂಗ್ರೆಸ್ ಪಕ್ಷ ನಡೆಸಿಕೊಳ್ಳುತ್ತಿರುವುದು ನಿಜಕ್ಕೂ ದುರಂತ. ಅಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇಂದು ಮಲ್ಲಿಕಾರ್ಜುನ ಖರ್ಗೆ. ಇಬ್ಬರ ಪರಿಸ್ಥಿತಿಯೂ ಒಂದೇ ಆಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಹಿರಿಯ ರಾಜಕಾರಣಿಗಳಿಗೆ ಬೆಲೆ ಇಲ್ಲ ಅನ್ನೊದು ಇದಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ.