ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನ ‘ಆಪರೇಷನ್ ಸಿಂದೂರ’ ವಿಜಯೋತ್ಸವ : ಬಿಸಿಸಿಐನಿಂದ ಮೂರೂ ಪಡೆಗಳ ಮುಖ್ಯಸ್ಥರಿಗೆ ಆಹ್ವಾನ
ನವದೆಹಲಿ: ಜೂನ್ 3 ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ಐಪಿಎಲ್ ಫೈನಲ್‌ಗೆ ಭಾರತೀಯ ಸಶಸ್ತ್ರ ಪಡೆಗಳ ಮೂರೂ ಸೇನಾ ಮುಖ್ಯಸ್ಥರನ್ನು ಆಹ್ವಾನಿಸಲಾಗಿದೆ ಎಂದು ಬಿಸಿಸಿಐ ಮಂಗಳವಾರ ತಿಳಿಸಿದೆ.
ಇತ್ತೀಚಿನ ಆಪರೇಷನ್ ಸಿಂಧೂರ್‌ನಲ್ಲಿ ಅವರ “ವೀರ ಪ್ರಯತ್ನಗಳಿಗೆ” ಗೌರವ ಸಲ್ಲಿಸುವ ಸಮಾರಂಭವೂ IPL 2025ರ ಫೈನಲ್ನಲ್ಲಿ ನಡೆಯಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಮಾಧ್ಯಮ ಹೇಳಿಕೆಯಲ್ಲಿ ಈ ಘೋಷಣೆ ಮಾಡಿದ್ದಾರೆ.