KRS: ಬಾಗಿನ ಅರ್ಪಿಸಿ ಹೊಸ ದಾಖಲೆ ಬರೆಯಲಿರುವ ಸಿಎಂ

ಮಂಡ್ಯ: ಕೆಆರ್‌ಎಸ್ ಜಲಾಶಯ ಜೂನ್ ತಿಂಗಳಲ್ಲಿ ಸಂಪೂರ್ಣವಾಗಿ ಭರ್ತಿ ಆಗುವ ಮೂಲಕ 93 ವರ್ಷಗಳ ಇತಿಹಾಸದಲ್ಲಿ ಐತಿಹಾಸಕ ದಾಖಲೆ ಬರೆದಿದೆ, ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾವೇರಿ ಬಾಗಿನ ಅರ್ಪಿಸುವ ಮೂಲಕ ಜೂನ್‌ನಲ್ಲಿ ಬಾಗಿನ ಅರ್ಪಿಸಿದ ಮೊದಲ ಸಿಎಂ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರರಾಗಲಿದ್ದಾರೆ,
ಹಳೆ ಮೈಸೂರು ಭಾಗದ ಜೀವನಾಡಿ ಕೆಆರ್‌ಎಸ್ (KRS) ಅಣೆಕಟ್ಟೆ ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ಭರ್ತಿಯಾಗಿದೆ. ಜೂನ್ ಆರಂಭದಿಂದ ಅಬ್ಬರಿಸುತ್ತಿರುವ ಮುಂಗಾರು ಮಳೆಯಿಂದಾಗಿ ಜೂನ್ ತಿಂಗಳಲ್ಲೇ ಕೆಆರ್‌ಎಸ್ ಭರ್ತಿಯಾಗಿದ್ದು, ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಾಗಿನ ಅರ್ಪಿಸಲಿದ್ದಾರೆ. ವೇದಬ್ರಹ್ಮ ಡಾ.ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಗಳು ನಡೆಯಲಿವೆ. ಬೆಳಗ್ಗೆ 11:30ರ ಅಭಿಜಿನ್ ಮೂಹೂರ್ತದಲ್ಲಿ ಬಾಗಿನ ಅರ್ಪಣೆ ಕಾರ್ಯಕ್ರಮ ನಡೆಯಲಿದೆ. ಬಾಗಿನ ಅರ್ಪಣೆ ಕಾರ್ಯಕ್ರಮ ಹಿನ್ನೆಲೆ ಕೆಆರ್‌ಎಸ್ ಮಧುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಎಲ್ಲಡೆ ಕನ್ನಡ ಬಾವುಟಗಳು ರಾರಾಜಿಸುತ್ತಿವೆ.

ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಹಲವು ಸಚಿವರು ಹಾಗೂ ಶಾಸಕರು ಉಪಸ್ಥಿತರಿರಲಿದ್ದಾರೆ, ಡ್ಯಾಂ ನಿರ್ಮಾಣ ಆದಾಗಿನಿಂದ ಜೂನ್ ತಿಂಗಳಲ್ಲಿ ಇದುವರೆಗೂ ತುಂಬಿರಲಿಲ್ಲ. ಆದರೆ 93 ವರ್ಷಗಳ ನಂತರ ಮೊಟ್ಟ ಮೊದಲ ಬಾರಿಗೆ ಈಗ ಕೆಆರ್​ಎಸ್ ಭರ್ತಿಯಾಗಿದೆ. 124.80 ಅಡಿಗಳ ಗರಿಷ್ಠ ಮಟ್ಟ ಸಂಪೂರ್ಣ ಭರ್ತಿ ಆಗಿದ್ದು ಹೊಸ ಮೈಲಿಗಲ್ಲು ಸೃಷ್ಟಿಯಾಗಿದೆ.