Home Advertisement
Home ತಾಜಾ ಸುದ್ದಿ ಚರ್ಮಗಂಟು ರೋಗ ನಿರ್ವಹಣೆಗೆ 13 ಕೋಟಿ ಬಿಡುಗಡೆಗೆ

ಚರ್ಮಗಂಟು ರೋಗ ನಿರ್ವಹಣೆಗೆ 13 ಕೋಟಿ ಬಿಡುಗಡೆಗೆ

0
159
ಚರ್ಮಗಂಟು ರೋಗ

ಬೆಂಗಳೂರು: ರಾಜ್ಯದಲ್ಲಿ ಹರಡುತ್ತಿರುವ ಜಾನುವಾರುಗಳ ಚರ್ಮಗಂಟು ರೋಗವನ್ನು ತಡೆಯಲು ಲಸಿಕೆ ಹಾಕಲು, ಚಿಕಿತ್ಸೆಗಾಗಿ ಹಾಗೂ ಮೃತಪಟ್ಟ ರಾಸುಗಳಿಗೆ ಪರಿಹಾರ ಒದಗಿಸಲು ಒಟ್ಟು 13 ಕೋಟಿ ರೂ. ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳು ಆರ್ಥಿಕ ಇಲಾಖೆಗೆ ಸೂಚಿಸಿದರು.
ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜಾನುವಾರುಗಳ ಚರ್ಮಗಂಟು ರೋಗದ ಕುರಿತು ಪರಿಶೀಲನಾ ಸಭೆ ನಡೆಸಿದರು. ಮೃತ ರಾಸುಗಳ ಪರಿಹಾರಕ್ಕೆ ಈಗಾಗಲೇ 2 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಹೆಚ್ಚುವರಿಯಾಗಿ 5 ಕೋಟಿ ರೂ. ಹಾಗೂ ಜಾನುವಾರುಗಳ ಚಿಕಿತ್ಸೆಗೆ ಮತ್ತು ಲಸಿಕೆಗೆ ಒಟ್ಟು 8 ಕೋಟಿ ರೂ. ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ರಾಜ್ಯದ 28 ಜಿಲ್ಲೆಗಳ 160 ತಾಲ್ಲೂಕುಗಳ 4380 ಗ್ರಾಮಗಳಲ್ಲಿ ಕಾಣಿಸಿಕೊಂಡಿವೆ. 45,645 ಜಾನುವಾರುಗಳು ರೋಗಕ್ಕೆ ತುತ್ತಾಗಿದ್ದು, 26,135 ಜಾನುವಾರುಗಳು ಗುಣಮುಖವಾಗಿವೆ. 2070 ಜಾನುವಾರುಗಳು ಮರಣ ಹೊಂದಿವೆ.

Previous articleಐಕ್ಯತಾ ಯಾತ್ರೆಯ ಏಕೈಕ ಸಮಾವೇಶಕ್ಕೆ ಗಣಿನಗರಿ ಸಜ್ಜು
Next articleʻಅಸ್ಪೃಶ್ಯರು ಎಂದು ತೋರಿಸುವುದೇ ಬಿಜೆಪಿ ಉದ್ದೇಶʼ