Home Advertisement
Home ತಾಜಾ ಸುದ್ದಿ ಐಐಐಟಿ ಧಾರವಾಡ ಉದ್ಘಾಟನೆಗೆ ಆಗಮಿಸಿದ ರಾಷ್ಟ್ರಪತಿ

ಐಐಐಟಿ ಧಾರವಾಡ ಉದ್ಘಾಟನೆಗೆ ಆಗಮಿಸಿದ ರಾಷ್ಟ್ರಪತಿ

0
236
ಐಐಐಟಿ‌

ಧಾರವಾಡ: ಇಲ್ಲಿನ ತಡಸಿನಕೊಪ್ಪದಲ್ಲಿ ನಿರ್ಮಾಣಗೊಂಡಿರುವ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ) ಉದ್ಘಾಟನೆಗೆ ಆಗಮಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಂಸ್ಥೆಯ ಅಧ್ಯಕ್ಷೆ ಸುಧಾ ಮೂರ್ತಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಇದ್ದರು.

ರಾಷ್ಟ್ರಪತಿ ಅವರಿಗೆ ಐಐಐಟಿ ಕ್ಯಾಂಪಸ್ ನಲ್ಲಿ ಗ್ರೀನ್ ರೂಮ್ ಸ್ಥಾಪಿಸಲಾಗಿದ್ದು, ಅವರಿಗಾಗಿ ವಿಶೇಷ ಊಟದ ವ್ಯವಸ್ಥೆ ಮಾಡಲಾಗಿದೆ. ಉತ್ತರ ಕರ್ನಾಟಕ ಶೈಲಿಯ ಸಾಂಪ್ರದಾಯಿಕ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು.

ಉದ್ಘಾಟನಾ ಕಾರ್ಯಕ್ರಮ ನಡೆಯಲಿರುವ ಸಭಾಂಗಣದಲ್ಲಿ 700 ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು, ಅಧಿಕಾರಿಗಳು, ಆಹ್ವಾನಿತ ಗಣ್ಯರು, ಭಾರತೀಯ ತಾಂತ್ರಜ್ಞಾನ ಸಂಸ್ಥೆ (ಐಐಟಿ) ಅಧಿಕಾರಿಗಳು ಇದ್ದಾರೆ.