Home ತಾಜಾ ಸುದ್ದಿ ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿ

ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿ

0

ಬೆಂಗಳೂರು: ನೂರು ದಿನಗಳ ಕಾಲ ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿ ಸಾಕು ಸಚಿವ ವಿ.ಸೋಮಣ್ಣ ಬಿಜೆಪಿ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ನಾನು ಪಕ್ಷದಲ್ಲಿ ಹಿರಿಯನಿದ್ದೇನೆ. 45 ವರ್ಷ ರಾಜಕಾರಣ ಅನುಭವದ ಆಧಾರದ ಮೇಲೆ ನನ್ನನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿ. ಎಲ್ಲರನ್ನು ನಾನು ಒಟ್ಟಿಗೆ ತೆಗೆದುಕೊಂಡು ಹೋಗುತ್ತೇನೆ. ಪಕ್ಷದ ಸಂಘಟನೆಯಲ್ಲಿ ಯಾವ ರೀತಿ ತೊಡಗಿಸಿಕೊಳ್ಳಬಹುದು ಎಂದು ತೋರಿಸಿಕೊಡ್ತೀನಿ ಎಂದಿದ್ದಾರೆ.
ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ, ಜೆ.ಪಿ. ನಡ್ಡಾ, ಬಿ.ಎಲ್. ಸಂತೋಷ್ ಸೇರಿ ಎಲ್ಲರನ್ನು ಭೇಟಿ ಮಾಡಿ ಮನವಿ ಮಾಡಿರುವುದಾಗಿ ಅವರು ತಿಳಿಸಿದರು.

Exit mobile version