Home ತಾಜಾ ಸುದ್ದಿ ಶಾಲಾ ಪಠ್ಯ ಪುಸ್ತಕದ ಪರಿಷ್ಕರಣೆ ಇಲ್ಲ

ಶಾಲಾ ಪಠ್ಯ ಪುಸ್ತಕದ ಪರಿಷ್ಕರಣೆ ಇಲ್ಲ

0

ಮೈಸೂರು: ಈ ಶೈಕ್ಷಣಿಕ ವರ್ಷದಲ್ಲಿ ಶಾಲಾ ಪಠ್ಯ ಪುಸ್ತಕದ ಪರಿಷ್ಕರಣೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಕೆಲವು ವ್ಯಾಕರಣ, ಪದಗಳನ್ನಷ್ಟೇ ಬದಲಾವಣೆ ಮಾಡಲಾಗಿದೆ. ಅಂದರೆ, ತಪ್ಪಿದ್ದನ್ನು ಸರಿ ಮಾಡಲಾಗಿದೆ. ಅದಕ್ಕಾಗಿ ಒಂದು ಪುಟ ಬದಲಾವಣೆ ಮಾಡಲಾಗಿದೆ. ಅದು ಬಿಟ್ಟರೆ ಯಾವುದೇ ಬದಲಾವಣೆ ಮಾಡುವುದಿಲ್ಲ, ಶಾಲಾ ಮಕ್ಕಳ ಪಠ್ಯ ಪುಸ್ತಕ ಮತ್ತು ಸಮವಸ್ತ್ರ ವಿತರಣೆ ಕುರಿತು ಪ್ರತಿಕ್ರಿಯಿಸಿದ ಸಚಿವ ಮಧು ಬಂಗಾರಪ್ಪ, ಈಗಾಗಲೇ ಶೇ 95 ರಷ್ಟು ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ವಿತರಣೆ ಮಾಡಲಾಗಿದೆ. ಈ ತಿಂಗಳ ಒಳಗೆ ಶೇ 100 ವಿತರಣೆ ಮಾಡುತ್ತೇವೆ ಎಂದರು.

Exit mobile version