ಸಿದ್ದರಾಮಯ್ಯ ರೈತರ ದ್ರೋಹಿ

0
27
ಈಶ್ವರಪ್ಪ

ಶಿವಮೊಗ್ಗ: ರೈತರ ದ್ರೋಹಿ ಯಾರಾದರೂ ಇದ್ದರೆ ಅದು ಸಿದ್ದರಾಮಯ್ಯ ಮಾತ್ರ ಎಂದು ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷಿ ಕಾಯ್ದೆ ಹಿಂಪಡೆಯುವ ಮೂಲಕ ರೈತರಿಗೆ ದ್ರೋಹ ಮಾಡಿದ್ದಾರೆ. ಬಜೆಟ್‌ನಲ್ಲಿ ಬೇರೆ ಬೇರೆ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿದ್ದಾರೆ ಎಂದರು.
ಇನ್ನು ಸರ್ಕಾರದಲ್ಲಿ ಶಾಸಕರ ಸಮಸ್ಯೆಗಳೇ ಹೆಚ್ಚಾಗಿದೆ. ಇದರಿಂದಾಗಿ ಜನರ ಸಮಸ್ಯೆಗಳನ್ನು ಆಲಿಸುವ ಕೆಲಸವಾಗುತ್ತಿಲ್ಲ. ಮುಖ್ಯಮಂತ್ರಿಗಳು ತೇಪೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದರು.

Previous articleಕಾವೇರಿ ನೀರು ಹಂಚಿಕೆ: ರಾಜ್ಯದ ಹಿತ ಗಮನದಲ್ಲಿಟ್ಟುಕೊಂಡು ತೀರ್ಮಾನ
Next articleಗುತ್ತಿಗೆದಾರರಿಗೆ ಪಾವತಿಯಾಗದ ಹಣ: ದಯಾಮರಣ ಕೋರಿ ಮನವಿ ಸಲ್ಲಿಸಲು ನಿರ್ಧಾರ