Home ತಾಜಾ ಸುದ್ದಿ ʼಮುಸ್ತಫಾ’ನಿಗೆ ವಿನಾಯಿತಿ ನೀಡಿದ ಸಿದ್ದರಾಮಯ್ಯ

ʼಮುಸ್ತಫಾ’ನಿಗೆ ವಿನಾಯಿತಿ ನೀಡಿದ ಸಿದ್ದರಾಮಯ್ಯ

0

ಬೆಂಗಳೂರು: ಪೂರ್ಣಚಂದ್ರ ತೇಜಸ್ವಿಯವರ ಸಣ್ಣ ಕಥೆ ಆಧರಿತ ‘ಡೇರ್​ ಡೆವಿಲ್ ಮುಸ್ತಫಾ’ ಚಲನಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆರಿಗೆ ವಿನಾಯಿತಿ ನೀಡಿ ಆದೇಶಿಸಿದ್ದಾರೆ,
ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಟ್ವೀಟ್‌ ಮಾಡಿರುವ ಅವರು “ತಮ್ಮ ಬರಹ ಮತ್ತು ಬದುಕಿನ ಮೂಲಕ ಒಂದಿಡೀ ತಲೆಮಾರಿನ ಜನರನ್ನು ಪ್ರಭಾವಿಸಿದ ಹಾಗೂ ಪ್ರಭಾವಿಸುತ್ತಲೇ ಇರುವ ಕನ್ನಡದ ಜನಪ್ರಿಯ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ಕತೆಯಾಧಾರಿತ “ಡೇರ್ ಡೆವಿಲ್ ಮುಸ್ತಫಾ” ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿ ಆದೇಶಿಸಿದ್ದೇನೆ.
ಇಂದಿನ ಕಾಲಘಟಕ್ಕೆ ಬೇಕಿರುವುದು ಸೌಹಾರ್ದತೆ, ಪ್ರೀತಿ, ವಿಶ್ವಾಸಗಳ ಬುನಾದಿಯ ಮೇಲೆ ಸಮಾಜ ಕಟ್ಟುವ ಮನಸುಗಳು. ಇಂಥದ್ದೊಂದು ಕಾರ್ಯಕ್ಕೆ ಕೈಹಾಕಿದ ಚಿತ್ರತಂಡಕ್ಕೆ ಅಭಿನಂದನೆಗಳು.ದ್ವೇಷ ಅಳಿಸಿ, ಪ್ರೀತಿ ಹಂಚುವ ಜನರಿಗೆ ನಮ್ಮ, ನಿಮ್ಮೆಲ್ಲರ ಬೆಂಬಲ ಇರಲಿ” ಎಂದಿದ್ದಾರೆ.

Exit mobile version