ಅಕ್ಟೋಬರ್ 16 ರಿಂದ 18 ರವರೆಗೆ ಶ್ರೀರಂಗಪಟ್ಟಣ ದಸರಾ ಉತ್ಸವ

0
22



ಶ್ರೀರಂಗಪಟ್ಟಣ: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಅಕ್ಟೋಬರ್ 16 ರಿಂದ 18 ರವರೆಗೆ ನಡೆಯಲಿರುವ ಶ್ರೀರಂಗಪಟ್ಟಣ ದಸರಾ ಉತ್ಸವಕ್ಕೆ ಸಕಲ‌ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.

ಕಿರಂಗೂರು ಬನ್ನಿಮಂಟಪದಲ್ಲಿ ಅಕ್ಟೋಬರ್ 16 ರಂದು ಮಧ್ಯಾಹ್ನ 12.30 ಕ್ಕೆ ನಂದಿಧ್ವಜ ಪೂಜೆ ಹಾಗೂ ಮಧ್ಯಾಹ್ನ 2.30 ರಿಂದ 3.15 ರವರೆಗೆ ಸಲ್ಲುವ ಶುಭಮಕರ ಲಗ್ನದಲ್ಲಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆ ಹಾಗೂ ಜಂಭೂ ಸವಾರಿ ಮೆರವಣಿಗೆಗೆ ರಾಜವಂಶಸ್ಥೆ ಪ್ರಮೋದದೇವಿ ಒಡೆಯರ್‌ರವರು ಚಾಲನೆ ನೀಡಲಿದ್ದಾರೆ.

ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣದ ಶ್ರೀರಂಗ ವೇದಿಕೆಯಲ್ಲಿ ಅಕ್ಟೋಬರ್ 16 ರಂದು ಸಂಜೆ 6.00 ಗಂಟೆಗೆ ಶ್ರೀರಂಗಪಟ್ಟಣ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ನಡೆಯಲಿದೆ. ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ರವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಎ.ಬಿ ರಮೇಶ್ ಬಂಡಿಸಿದ್ದೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ ಮಹದೇವಪ್ಪ, ಕಾನೂನು ಸಂಸದೀಯ ವ್ಯವಹಾರಗಳ ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ, ವೈದ್ಯಕೀಯ ಶಿಕ್ಷಣ ಕೌಶಲ್ಯಾಭಿವೃದ್ಧಿ , ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಡಾ. ಶರಣಪ್ರಕಾಶ ರುದ್ರಪ್ಪ ಪಾಟೀಲ್, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ, ಸಂಸದೆ ಸುಮಲತಾ ಅಂಬರೀಶ್, ವಿಧಾನ ಪರಿಷತ್ ಶಾಸಕರುಗಳಾದ ಮರಿತಿಬ್ಬೇಗೌಡ, ಮಧು ಜಿ ಮಾದೇಗೌಡ, ದಿನೇಶ್ ಗೂಳೀಗೌಡ, ವಿಧಾನ ಸಭಾ ಶಾಸಕರುಗಳಾದ ಪಿ.ಎಂ ನರೇಂದ್ರಸ್ವಾಮಿ, ಪಿ. ರವಿಕುಮಾರ್, ದರ್ಶನ್ ಪುಟ್ಟಣ್ಣಯ್ಯ, ಎಚ್.ಟಿ ಮಂಜು, ಕೆ.ಎಂ ಉದಯ್ ಹಾಗೂ ಕಿರಂಗೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಹೆಚ್.ಪಿ ಶೃತಿ ರವರುಗಳು ಭಾಗವಹಿಸಲಿದ್ದಾರೆ.

Previous articleಕಚೇರಿಯಲ್ಲೇ ಕುಳಿತರೆ ಸಮಸ್ಯೆ ಬಗೆಹರಿಯಲ್ಲ
Next articleದಸರಾ: ಶ್ರೀರಂಗಪಟ್ಟಣದಲ್ಲಿ ವಿವಿಧ ಕಾರ್ಯಕ್ರಮಗಳು