Home ತಾಜಾ ಸುದ್ದಿ ಅಕ್ರಮವಾಗಿ ಸರ್ಕಾರಿ ಜಮೀನು ಒತ್ತವರಿ: ದಾಖಲೆ ಸೃಷ್ಠಿಗೆ ಅಧಿಕಾರಿಗಳೇ ಸಾಥ್ – ರೈತ ಮುಖಂಡರ ಆರೋಪ

ಅಕ್ರಮವಾಗಿ ಸರ್ಕಾರಿ ಜಮೀನು ಒತ್ತವರಿ: ದಾಖಲೆ ಸೃಷ್ಠಿಗೆ ಅಧಿಕಾರಿಗಳೇ ಸಾಥ್ – ರೈತ ಮುಖಂಡರ ಆರೋಪ

0

ಶ್ರೀರಂಗಪಟ್ಟಣ: ಖಾಸಗಿ ವ್ಯಕ್ತಿಯೋರ್ವ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದು, ಅಧಿಕಾರಿಗಳೇ ಅಕ್ರಮವಾಗಿ ಒತ್ತುವರಿ ಭೂಮಿಗೆ ನಕಲಿ ದಾಖಲೆ ಸೃಷ್ಟಿಸಿಕೊಡುತ್ತಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮ ಜರುಗಿಸುವಂತೆ ಒತ್ತಾಯಿಸಿ ರೈತ ಮುಖಂಡರುಗಳು ಪಟ್ಟಣದ ತಾಲ್ಲಾಕು ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಶ್ರೀರಂಗಪಟ್ಟಣ ತಾಲ್ಲೂಕಿನ ಬೀಚನಕುಪ್ಪೆ ಗ್ರಾಮದ ಸರ್ವೆ ನಂಬರ್ 76 ರಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅನ್ಯಕ್ರಾಂತ ಭೂ ಪರಿವರ್ತನೆ ಮಾಡಿಸದೆಯೇ ನಿವೇಶನ ಚಿಕೆ ಮಾಡಲು ಮುಂದಾಗಿದ್ದಾರೆ.

ಗ್ರಾಮ ಪಂಚಾಯಿತಿ ಅಧಿಕಾರಿಗಳು ನೇರವಾಗಿ ಖಾಸಗಿ ವ್ಯಕ್ತಿಯೊಂದಿಗೆ ಶಾಮೀಲಾಗಿದ್ದು, ಸರ್ಕಾರಿ‌ ಜಮೀನನ್ನು ಖಾಸಗಿ ವ್ಯಕ್ತಿಯ ಅನುಕೂಲಕ್ಕೆ ತಕ್ಕಂತೆ ದಾಖಲೆಗಳನ್ನು ಪಂಚಾಯಿತಿ ಅಧಿಕಾರಿಗಳೇ ನೀಡಲು ಮುಂದಾಗಿದ್ದಾರೆ.

ಈ ಬಗ್ಗೆ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಹಾಗೂ ತಾಲ್ಲೂಕು ಆಡಳಿತ ಈ ಬಗ್ಗೆ ಮೌನವಹಿಸಿದ್ದು, ಸರ್ಕಾರ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳಿಗೆ ಶಿಕ್ಷೆ ವಿಧಿಸಿ ಸರ್ಕಾರಿ ಜಮೀನನ್ನು ವಶಪಡಿಸಿಕೊಳ್ಳಬೇಕೆಂದು ರೈತ ಮುಖಂಡರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡ ಕೆ.ಎಸ್.ನಂಜುಂಡೇಗೌಡ ಸೇರಿದಂತೆ ಐವತ್ತಕ್ಕೂ ರೈತ ಮುಖಂಡರು ಪ್ರತಿಭಟನೆಯಲ್ಲಿ ಭಾಗುವಹಿಸಿದ್ದರು.

Exit mobile version