ಅಧಿಕಾರಕ್ಕೆ ಬಂದಿದ್ದೇ ಲೂಟಿಗಾಗಿ

0
32

ಬೆಂಗಳೂರು: ಅಧಿಕಾರಕ್ಕೆ ಬಂದಿದ್ದೇ ಲೂಟಿಗಾಗಿ ಎಂದು ಸಾಬೀತುಮಾಡುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್‌ ಕುಮಾರ್‌ ಕಟೀಲ್‌ ರಾಜ್ಯ ಸರ್ಕಾರವನ್ನು ಆರೋಪಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು “ಈ ತುಘಲಕ್ ಸರ್ಕಾರದ ಆಡಳಿತದಲ್ಲಿ ಕೊಲೆ, ಸುಲಿಗೆ, ದರೋಡೆ ಪ್ರಕರಣಗಳು ಸಾಮಾನ್ಯವಾಗಿ ಕ್ರೈಂ ರೇಟ್ ಹೆಚ್ಚಾಗಿದೆ. ಸರ್ಕಾರದ ರೈತ ವಿರೋಧಿ ನೀತಿಯಿಂದಾಗಿ ಎರಡು ತಿಂಗಳಲ್ಲಿ ಒಟ್ಟು 46 ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿನನಿತ್ಯದ ಬಳಕೆ ವಸ್ತುಗಳ ಬೆಲೆ ಏರಿಕೆ ಆಗಿ ಬಡ ಹಾಗೂ ಮಧ್ಯಮ ವರ್ಗದ ಜನರು ಜೀವನ ನಡೆಸುವುದೇ ಕಷ್ಟವಾಗಿದೆ. ಆದರೆ ಇದ್ಯಾವುದಕ್ಕೂ ಕ್ಯಾರೇ ಎನ್ನದೆ ಕಾಂಗ್ರೆಸ್‌ ವರ್ಗಾವಣೆ ದಂಧೆಯಲ್ಲಿ ಲೂಟಿ ಕಾರ್ಯದಲ್ಲಿ ನಿರತವಾಗಿ, ನಾವು ಅಧಿಕಾರಕ್ಕೆ ಬಂದಿದ್ದೇ ಲೂಟಿಗಾಗಿ ಎಂದು ಸಾಬೀತುಮಾಡುತ್ತಿದ್ದಾರೆ. ಸಾಕ್ಷಿ ಸಮೇತ ಸೆರೆ ಸಿಕ್ಕವರನ್ನೂ ಭಯೋತ್ಪಾದಕರು ಎಂದು ಹೇಳಲು ಗೃಹ ಮಂತ್ರಿಗಳೇ ಹಿಂಜರಿಯುತ್ತಿದ್ದಾರೆ! ಈ ಪ್ರಕರಣದ ತನಿಖೆಯ ಮೇಲುಸ್ತುವಾರಿಯನ್ನು ಈ ಸರ್ಕಾರ ನೋಡಿಕೊಂಡರೆ ಎಲ್ಲಾ ಭಯೋತ್ಪಾದಕರಿಗೂ ಕ್ಲೀನ್ ಚಿಟ್ ಸಿಗಲಿದೆ! ಹಾಗಾಗಿ ಈ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಎನ್.ಐ‌.ಎ ಗೆ ವಹಿಸಬೇಕೆಂದು ನಾವು ಆಗ್ರಹಿಸುತ್ತೇವೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಿದ ಎರಡೇ ತಿಂಗಳಲ್ಲಿ ಕಾನೂನು ಸುವ್ಯವಸ್ಥೆಯನ್ನು ಬುಡಮೇಲು ಮಾಡಿದೆ. ಬೆಲೆಯೇರಿಕೆಯಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಅನ್ನದಾತ ಆತ್ಮಹತ್ಯೆಯ ಹಾದಿ ಹಿಡಿದಿದ್ದಾನೆ. ಕಾಂಗ್ರೆಸ್ಸಿನ ಈ ಎಲ್ಲ ಜನವಿರೋಧಿ ನೀತಿಗಳ ವಿರುದ್ಧ ನಮ್ಮ ಪಕ್ಷ ಇಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ” ಎಂದಿದ್ದಾರೆ.

Previous articleನುಸುಳುಕೋರರಿಗೆ ಕೇಂದ್ರದಿಂದ ತಕ್ಕ ಉತ್ತರ
Next articleಮತ್ತೆ ನೈತಿಕ ಪೊಲೀಸ್ ಗಿರಿ: ಇಬ್ಬರ ಸೆರೆ