ಅನಾರೋಗ್ಯದಿಂದ ಬಳಲುತ್ತಿದ್ದಾರೆ ಹಿರಿಯ ನಟಿ ಲೀಲಾವತಿ

0
22

ಕನ್ನಡ ಚಿತ್ರರಂಗದ ಮಹಾನ್ ನಟಿ ಲೀಲಾವತಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹಾಗಾಗಿ ಹಾಸಿಗೆ ಹಿಡಿದಿರುವ ನಟಿ ಲೀಲಾವತಿ ಅವರ ಯೋಗಕ್ಷೇಮ ವಿಚಾರಿಸಲು ಅವರ ನಿವಾಸಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮ ಹರೀಶ್ ಭೇಟಿ ನೀಡಿದ್ದಾರೆ.

ಕನ್ನಡ ಮಾತ್ರವಲ್ಲದೇ ಬಹುಭಾಷೆಗಳಲ್ಲಿ ಛಾಪೂ ಮೂಡಿಸಿರುವ ನಟಿ ಲೀಲಾವತಿ ಇದೀಗ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ನೆಲಮಂಗಲದ ಅವರ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆಯಂತೆ ಸೂಕ್ತ ಚಿಕಿತ್ಸೆಯನ್ನ ಲೀಲಾವತಿ ಪಡೆದುಕೊಳ್ಳುತ್ತಿದ್ದಾರೆ.

Previous article28 ಅಡಿ ಎತ್ತರದ ನೇತಾಜಿ ಪ್ರತಿಮೆ ಅನಾವರಣ
Next articleಬೆಂಗಳೂರು ಯೋಗ್ಯವಲ್ಲ ಎನ್ನುವವರು ಬೆಂಗಳೂರಿಗೆ ಬರಬೇಡಿ: ಮುನಿರತ್ನ