ಸಮಾವೇಶದಲ್ಲಿ ಸ್ವಾಮೀಜಿಯೊಬ್ಬರು ಬಹಿರಂಗವಾಗಿ ಹಣವನ್ನು ಅಭ್ಯರ್ಥಿಗೆ ನೀಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ನಡೆದಿದೆ.
ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಮಾವೇಶದಲ್ಲಿ ಜನಾರ್ದನ ರೆಡ್ಡಿ ಅವರ ಸಮ್ಮುಖದಲ್ಲಿಯೇ ಹೊನ್ಯಾಳದ ರೇವಣಸಿದ್ದಯ್ಯ ಶ್ರೀಶೈಲಯ್ಯ ಶ್ರೀಗಳು ಕುಡಚಿ ಮತಕ್ಷೇತ್ರದ ಅಭ್ಯರ್ಥಿ ಶ್ರೀಶೈಲ ಭಜಂತ್ರಿಯವರಿಗೆ ಹಣ ನೀಡಿದ್ದಾರೆ. ಸಮಾವೇಶದಲ್ಲಿ ಬಹಿರಂಗವಾಗಿ ಹಣ ನೀಡುವ ಮೂಲಕ ಸ್ವಾಮೀಜಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.