ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಹಿಂಸಾಚಾರ ಆಗುತ್ತದೆ ಎಂದು ರಾಜ್ಯದ ಮತದಾರರಿಗೆ ಬೆದರಿಕೆ ಒಡ್ಡಿರುವ ಕೇಂದ್ರ ಸಚಿವ ಅಮಿತ್ ಶಾ ಅವರ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಕೋರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಎಐಸಿಸಿ ವಕ್ತಾರ ಗೌರವ್ ವಲ್ಲಭ್ ಅವರು ಬೆಂಗಳೂರಿನ ಹೈ ಗ್ರೌಂಡ್ಸ್ ಪೊಲೀಸರಿಗೆ ಗುರುವಾರ ದೂರು ಸಲ್ಲಿಸಿದರು. ವರುಣಾ ಹಾಗೂ ಚಮರಾಜನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ದೂರು ನೀಡಿದ್ದಾರೆ. ಸಚಿವ ವಿ.ಸೋಮಣ್ಣ ಚಾಮರಾಜನಗರ ಜೆಡಿಎಸ್ ಅಭ್ಯರ್ಥಿಗೆ ಆಮಿಷವೊಡ್ಡಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಅಮಿತ್ ಶಾ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಾಟೆಗಳು ನಡೆಯುತ್ತವೆ. ಘರ್ಷಣೆ, ಗಲಭೆಗಳು ಹೆಚ್ಚಾಗುತ್ತವೆ ಎಂದು ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ವಿ.ಸೋಮಣ್ಣ ಹಾಗೂ ಅಮಿತ್ ಶಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
