ಬಾಗಲಕೋಟೆ: ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಇಳಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರ ಹೆಲಿಕಾಪ್ಟರ್‌ನ್ನು ಚುನಾವಣಾಧಿಕಾರಿಗಳು ಪರಿಶೀಲನೆ ಮಾಡಿದರು.
ರಬಕವಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲು ಅಮಿತ್ ಶಾ ಅವರು ಹುಬ್ಬಳ್ಳಿಯಿಂದ ಹೆಲಿಕಾಪ್ಟರ್‌ನಲ್ಲಿ ರಬಕವಿಗೆ ಆಗಮಿಸಿದ್ದರು. ಈ ವೇಳೆ ಚುನಾವಣಾಧಿಕಾರಿಗಳು ತಪಾಸಣೆ ಮಾಡಿ ಫೋಟೊ, ವಿಡಿಯೋ ಮಾಡಿಕೊಂಡಿದ್ದಾರೆ.