Home ತಾಜಾ ಸುದ್ದಿ ಅರಸೀಕೆರೆಯಲ್ಲಿ ಅಪಘಾತ: ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ

ಅರಸೀಕೆರೆಯಲ್ಲಿ ಅಪಘಾತ: ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ

0
bommai

ಹಾಸನ: ಜಿಲ್ಲೆಯ ಅರಸೀಕೆರೆಯಲ್ಲಿ ಬಸ್ ಅಪಘಾತವಾಗಿದ್ದು, ಸುಮಾರು 9 ಜನ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಗಳ ಪರಿಹಾರ ನೀಡಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಅವರು ಇಂದು ಕೆ.ಆರ್.ಪೇಟೆಯ ಅಂಬಿಗ್ರಾಮ ಹೆಲಿಪ್ಯಾಡ್‌ಗೆ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಟ್ಯಾಂಕರ್ ಮತ್ತು ಬಸ್‌ಗಳ ನಡುವೆ ಅಪಘಾತವಾಗಿದೆ. ಅಪಘಾತದ ಸ್ಥಳಕ್ಕೆ ಕೂಡಲೇ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿ ಮರಣಿಸಿದವರ ಮರಣೋತ್ತರ ಪರೀಕ್ಷೆ ಮಾಡಬೇಕು ಎಂದು ಸೂಚಿಸಲಾಗಿದೆ ಎಂದರು.

Exit mobile version