ಅರುಣಾಚಲದಲ್ಲಿ ಮತ್ತೆ ಅರಳಿದೆ ಬಿಜೆಪಿ

0
14
BJP

ಬಿಜೆಪಿಗೆ ಬಹುಮತ: 60ರ ಪೈಕಿ 47 ಸ್ಥಾನಗಳಲ್ಲಿ ಮುನ್ನಡೆ

ಅರುಣಾಚಲ: ಅರುಣಾಚಲ ಪ್ರದೇಶದಲ್ಲಿ ಬಿಜೆಪಿ 60 ಸ್ಥಾನಗಳಲ್ಲಿ 38 ಸ್ಥಾನಗಳನ್ನು ಗೆದ್ದಿದೆ. ಮೊದಲು 10 ಅವಿರೋಧವಾಗಿ ಗೆದ್ದುಕೊಂಡಿತ್ತು.
ಅರುಣಾಚಲ ಪ್ರದೇಶದಲ್ಲಿ ಸತತ ಮೂರನೇ ಗೆಲುವು ದಾಖಲಿಸಲಿರುವ ಬಿಜೆಪಿ. ಅರುಣಾಚಲ ಪ್ರದೇಶದಲ್ಲಿ ಮತ್ತೆ ಬಿಜೆಪಿ ಸರ್ಕಾರ ರಚನೆಯಾಗುವುದು ಖಚಿತಪಟ್ಟಿದೆ. ಸಾಕಷ್ಟು ಮುನ್ನಡೆ ಸಾಧಿಸಿದ್ದು, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಮೂರನೇ ಅವಧಿಗೆ ಸರ್ಕಾರ ರಚಿಸುವುದು ಗ್ಯಾರಂಟಿಯಾಗಿದೆ. ಏಪ್ರಿಲ್ 19 ರಂದು ಮೊದಲ ಹಂತದ ಚುನಾವಣೆಯಲ್ಲಿ ಅರುಣಾಚಲ ಪ್ರದೇಶದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳು ಏಕಕಾಲದಲ್ಲಿ ನಡೆದವು. ಈಶಾನ್ಯ ರಾಜ್ಯವು 60 ವಿಧಾನಸಭಾ ಸ್ಥಾನಗಳನ್ನು ಮತ್ತು ಎರಡು ಲೋಕಸಭಾ ಸ್ಥಾನಗಳನ್ನು ಹೊಂದಿದ್ದು, ಇಂದು ಬೆಳಗ್ಗೆ 6 ಗಂಟೆಗೆ ಮತ ಎಣಿಕೆ ಆರಂಭಗೊಂಡಿದ್ದು, ಮಧ್ಯಾಹ್ನದ ವೇಳೆಗೆ ಅಂತಿಮ ಫಲಿತಾಂಶ ಹೊರಬೀಳುವ ನಿರೀಕ್ಷೆಯಿದೆ.

Previous article14 ಕ್ಷೇತ್ರಗಳಲ್ಲಿ ಗೆಲುವು ಖಚಿತ!
Next articleಅರುಣಾಚಲದಲ್ಲಿ ಬಿಜೆಪಿಯ ದಾಖಲೆ ಜಯ: ಸಿಕ್ಕಿಂನಲ್ಲಿ ಎರಡನೇ ಬಾರಿ ಅಧಿಕಾರಕ್ಕೆ SKM