ಬೆಳಗಾವಿ: ಡಿಸಿಎಂ ಡಿ.ಕೆ. ಶಿವಕುಮಾರ ಅವರು ಯಡಿಯೂರಪ್ಪ, ಬೊಮ್ಮಾಯಿ ಮನೆಗೆ ಹೋಗಿ ಸೌಜನ್ಯ ಭೇಟಿ ಎನ್ನುತ್ತಾರೆ. ಆದರೆ, ಸೌಜನ್ಯ ಭೇಟಿ ಕೊಡ್ತಿಲ್ಲ ಸೋನಿಯಾ ಗಾಂಧಿಗೆ ಅಂಜಿಸುವ ಕೆಲಸ ಮಾಡುತ್ತಾರೆ. ಬೊಮ್ಮಾಯಿಯವರೇ ಅವರನ್ನ ನೀವು ಮನೆವರೆಗೂ ಬಿಟ್ಟುಕೊಳ್ಳಬೇಡಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಬೆಳಗಾವಿಯ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ನಾವು ವಿರೋಧ ಪಕ್ಷದವರ ಮನೆಗೆ ಹೋಗುವುದಿಲ್ಲ ಅಂತಾರೆ. ಅದೇ ರೀತಿ ನಾವು ಅವರ ಮನೆಗೆ ಹೋಗುವುದಿಲ್ಲ ಅಂತಾ ಹೇಳಿ. ಅವರನ್ನ ಸ್ವಾಗತಿಸಿಕೊಂಡ್ರೇ ನಮ್ಮ ಕಾರ್ಯಕರ್ತರು ಮಲಗಿ ಬಿಡುತ್ತಾರೆ ಎಂದರು.