ಬೆಂಗಳೂರು: ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರು ತಮ್ಮ ಆಯ್ಕೆ ಅನೂರ್ಜಿತಗೊಳಿಸಿರುವ ಹೈಕೋರ್ಟ್ ಆದೇಶದ ಸಂಬಂಧ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ವರೆಗೂ, ಪಿಎಂ ಸ್ಥಾನದಿಂದ ಅಸಿಂಧು ಆದೇಶಕ್ಕೆ ಮಧ್ಯಂತರ ತಡೆ ನೀಡುವಂತೆ ಕೋರಿ ಹೈಕೋರ್ಟ್‌ಗೆ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ.