Home Advertisement
Home ತಾಜಾ ಸುದ್ದಿ ಆಕಸ್ಮಿಕ ಬೆಂಕಿ, ಹೊತ್ತಿ ಉರಿದ ಕ್ಯಾಂಟರ್‌ಗಳು

ಆಕಸ್ಮಿಕ ಬೆಂಕಿ, ಹೊತ್ತಿ ಉರಿದ ಕ್ಯಾಂಟರ್‌ಗಳು

0
122

ಹುಕ್ಕೇರಿ: ತಾಲೂಕಿನ ಹಿಟ್ನಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಧಾಬಾ ಮುಂದೆ ಕಾರುಗಳನ್ನು ಹೊತ್ತು ನಿಂತಿದ್ದ ಎರಡು ಕ್ಯಾಂಟರ್ ಲಾರಿಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ವಾಹನಗಳು ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಘಟನೆ ಶುಕ್ರವಾರ ಬೆಳಿಗ್ಗೆ ಜರುಗಿದೆ.
ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿಯ ಚಾಲಕ ಟೀ ಕುಡಿಯುವುದಕ್ಕೆ ಧಾಬಾ ಮುಂದೆ ನಿಲ್ಲಿಸಿದ್ದ ಕ್ಯಾಂಟರ್ ಲಾರಿಗಳಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು, ನೋಡ ನೋಡುವಷ್ಟರಲ್ಲಿಯೇ ಧಗಧಗನೆ ಹೊತ್ತಿ ಉರಿಯಲಾರಂಭಿಸಿವೆ. ಈ ಬೆಂಕಿ ಅವಘಡ ನಡೆದ ಸ್ಥಳದಿಂದ ಸ್ವಲ್ಪ ಅಂತರದಲ್ಲಿಯೇ ಪೆಟ್ರೋಲ್ ಬಂಕ್ ಇದ್ದು, ಅಪಾಯದ ಮುನ್ಸೂಚನೆ ಅರಿತ ಸ್ಥಳದಲ್ಲಿದ್ದ ಜನರ ಅಗ್ನಿಶಾಮಕ ಠಾಣೆಗೆ ಕರೆ ಮಾಡಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ


.