ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಕೇಂದ್ರ ಸರಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ಆಗಸ್ಟ್ 2ರಿಂದ ಆರಂಭಿಸುವುದಾಗಿ ಸುಪ್ರೀಂ ಕೋರ್ಟ್ ನಿರ್ಧರಿಸಿದೆ.
ಈ ಕುರಿತು ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠ ಜುಲೈ 27ರೊಳಗೆ ಎಲ್ಲಾ ದಾಖಲೆಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬೇಕು. ಸೋಮವಾರ ಮತ್ತು ಶುಕ್ರವಾರ ಹೊರತುಪಡಿಸಿ ಪ್ರತಿದಿನವೂ ಪ್ರಕರಣದ ವಿಚಾರಣೆ ನಡೆಯಲಿದೆ ಎಂದು ಹೇಳಿದೆ.