Home ತಾಜಾ ಸುದ್ದಿ ಆಗಸ್ಟ್‌ 2ರಿಂದ 370ನೇ ವಿಧಿ ರದ್ದು ವಿರುದ್ಧದ ಅರ್ಜಿ ವಿಚಾರಣೆ

ಆಗಸ್ಟ್‌ 2ರಿಂದ 370ನೇ ವಿಧಿ ರದ್ದು ವಿರುದ್ಧದ ಅರ್ಜಿ ವಿಚಾರಣೆ

0

ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಕೇಂದ್ರ ಸರಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ಆಗಸ್ಟ್‌ 2ರಿಂದ ಆರಂಭಿಸುವುದಾಗಿ ಸುಪ್ರೀಂ ಕೋರ್ಟ್ ನಿರ್ಧರಿಸಿದೆ.

ಈ ಕುರಿತು ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠ ಜುಲೈ 27ರೊಳಗೆ ಎಲ್ಲಾ ದಾಖಲೆಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬೇಕು. ಸೋಮವಾರ ಮತ್ತು ಶುಕ್ರವಾರ ಹೊರತುಪಡಿಸಿ ಪ್ರತಿದಿನವೂ ಪ್ರಕರಣದ ವಿಚಾರಣೆ ನಡೆಯಲಿದೆ ಎಂದು ಹೇಳಿದೆ.

Exit mobile version