ಆದರ್ಶ ಶಿಕ್ಷಕರಿಂದ ಮಾತ್ರ ಆದರ್ಶ ವಿದ್ಯಾರ್ಥಿಗಳನ್ನು ರೂಪಿಸಲು ಸಾಧ್ಯ

0
18
ಸಿದ್ದರಾಮಯ್ಯ

ಬೆಂಗಳೂರು: ಆದರ್ಶ ಶಿಕ್ಷಕರಿಂದ ಮಾತ್ರ ಆದರ್ಶ ವಿದ್ಯಾರ್ಥಿಗಳನ್ನು ರೂಪಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಅವರು ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ಅವರಿಗೆ ಗೌರವ ನಮನ ಸಲ್ಲಿಸಿ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಅವರು ವರ್ಷದ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ತಯಾರು ಮಾಡುವವರು ಶಿಕ್ಷಕರು. ಬದುಕಿನ ಪರೀಕ್ಷೆ ಎದುರಿಸಲು ವಿದ್ಯಾರ್ಥಿಗಳನ್ನು ಅಣಿಮಾಡುವವರು ಆದರ್ಶ ಶಿಕ್ಷಕರು.
ಆದರ್ಶ ಶಿಕ್ಷಕರಿಂದ ಮಾತ್ರ ಆದರ್ಶ ವಿದ್ಯಾರ್ಥಿಗಳನ್ನು ರೂಪಿಸಲು ಸಾಧ್ಯ.
ವಿದ್ಯಾರ್ಥಿಗಳಿಗೆ ಪುಸ್ತಕ ಜ್ಞಾನವಷ್ಟೇ ಅಲ್ಲ ಬದುಕಿನ ಜ್ಞಾನವನ್ನು ಧಾರೆಯೆರೆಯುವ ಮತ್ತು ಮಾನವೀಯ ಸಂಬಂಧಗಳು ಕುಸಿಯುತ್ತಿರುವ ಈ ಹೊತ್ತಿನಲ್ಲಿ ಹೃದಯದಿಂದ ಬೋಧಿಸುವ ಶಿಕ್ಷಕರ ಅಗತ್ಯ ಸಮಾಜಕ್ಕಿದೆ.
ಈ ದಿಸೆಯಲ್ಲಿ ನಾಡಿನ ಶಿಕ್ಷಕ ವರ್ಗದ ಚಿಂತನೆಗಳು ಸಾಗಲಿ ಎಂದು ಹಾರೈಸುತ್ತೇನೆ
ನನ್ನ ಎಲ್ಲ ಪ್ರೀತಿಯ ಜ್ಞಾನದಾಸೋಹಿ ಶಿಕ್ಷಕ ಬಂಧುಗಳಿಗೆ ಶಿಕ್ಷಕರ ದಿನದ ಶುಭಾಶಯಗಳು. ಈ ದಿನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರನ್ನು ಗೌರವದಿಂದ ಸ್ಮರಿಸುತ್ತ ನನ್ನ ನಮನಗಳನ್ನು ಸಲ್ಲಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

Previous articleನಮ್ಮೂರ ಮಹಾತ್ಮೆ
Next articleಅಸಿಂಧು ಆದೇಶಕ್ಕೆ ಮಧ್ಯಂತರ ತಡೆ ಕೋರಿ ಹೈಕೋರ್ಟ್‌ಗೆ ಪ್ರಜ್ವಲ್‌ ರೇವಣ್ಣ ಮನವಿ