Home ತಾಜಾ ಸುದ್ದಿ ಇಂದು ಸಂಜೆ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ

ಇಂದು ಸಂಜೆ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ

0
114
JDS

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಲಿದೆ. ಮೊದಲ ಪಟ್ಟಿಯಲ್ಲಿ 93 ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡಿದ್ದ ಜೆಡಿಎಸ್‌ ನಾಯಕರು, ಎರಡನೇ ಪಟ್ಡಿಯಲ್ಲಿ 30 ರಿಂದ 50 ಕ್ಷೇತ್ರಗಳಲ್ಲಿ ಟಿಕೆಟ್ ಘೋಷಣೆ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಎರಡನೇ ಪಟ್ಟಿಯಲ್ಲಿ ಹಾಸನ ಅಭ್ಯರ್ಥಿ ಘೋಷಣೆ ಮಾಡದಂತೆ ದೇವೇಗೌಡರಿಂದ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಕುಮಾರಸ್ವಾಮಿ ಅವರು ಹಾಸನ ಟಿಕೆಟ್ ಕೈ ಬಿಟ್ಟು ಎರಡನೇ ಪಟ್ಟಿ ಬಿಡುಗಡೆ ಮಾಡುವ ನಿರ್ಧಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ.