ಇದು ನನ್ನ ಕೊನೆಯ ಅಧಿವೇಶನ: ಬಿಎಸ್‌ವೈ

0
40
yeddyurappa

ಇದು ನನ್ನ ಕೊನೆಯ ಅಧಿವೇಶನ, ಮತ್ತೆ ನಾನು ಚುನಾವಣೆಗೆ ನಿಲ್ಲಲ್ಲ. ಮತ್ತೆ ನಾನು ಈ ಸದನಕ್ಕೆ ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ.
ಇಂದು ಸದನದಲ್ಲಿ ಭಾವುಕರಾಗಿ ಮಾತನಾಡಿದ ಅವರು, ಪಕ್ಷದ ಅವಕಾಶದಿಂದ 4 ಬಾರಿ ಮುಖ್ಯಮಂತ್ರಿ ಆಗಿದ್ದೇನೆ. ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ ಎಂದರು. ಈ ವೇಳೆ ಮತ್ತೆ ಚುನಾವಣೆಗೆ ನಿಲ್ಲಿ, ಯಾಕೆ ನಿಮ್ಮ ಹೈಕಮಾಂಡ್ ನಿಮ್ಮನ್ನು ಚುನಾವಣೆಯಲ್ಲಿ ಸ್ಪರ್ಧಿಸಲು ಬಿಡಲ್ವಾ ಎಂದು ಕಾಂಗ್ರೆಸ್ ನಾಯಕರು ಸದನದಲ್ಲಿ ಕಾಲೆಳೆದಿದ್ದಾರೆ. ಅವರ ಮಾತಿಗೆ ಪ್ರತಿಕ್ರಿಯಿಸಿದ ಬಿಎಸ್‌ವೈ ಕಾಂಗ್ರೆಸ್ ನಾಯಕರು ಪದೇ ಪದೇ ಪಕ್ಷ ನನ್ನನ್ನ ಕಡೆಗಣಿಸಿದೆ ಎನ್ನುತ್ತಾರೆ, ಪ್ರಧಾನಿ ಮೋದಿ ಅವರು ಎಂದು ನನ್ನ ಕಡೆಗಣಿಸಿಲ್ಲ. ಒಳ್ಳೆಯ ಅವಕಾಶ, ಸ್ಥಾನಮಾನ ಕೊಟ್ಟಿದ್ದಾರೆ. ಅವರನ್ನ ನಾನು‌ ಮರೆಯಲು ಸಾಧ್ಯವಿಲ್ಲ ಎಂದರು. ನಾನು ಬದುಕಿನ ಉಸಿರುವವರೆಗೆ ಬಿಜೆಪಿಯಲ್ಲೇ ಇರ್ತಿನಿ ಎಂದು ಭಾವುಕರಾದರು.

Previous articleಮಂತ್ರಾಲಯದ ಶ್ರೀಮಠದಲ್ಲಿ ಶ್ರೀಗುರುವೈಭೋತ್ಸವ
Next articleಗಣಿನಾಡಲ್ಲೇ ಬಿಜೆಪಿಗೆ ಕಂಪನ: ಬಿಜೆಪಿಗೆ ಟಾನಿಕ್ ನೀಡಬಲ್ಲರೇ ಅಮಿತ್ ಶಾ