Home ತಾಜಾ ಸುದ್ದಿ ಉಚಿತ ವಿದ್ಯುತ್: 34 ಲಕ್ಷ ನೋಂದಣಿ

ಉಚಿತ ವಿದ್ಯುತ್: 34 ಲಕ್ಷ ನೋಂದಣಿ

0

ಬೆಂಗಳೂರು: ೨೦೦ ಯೂನಿಟ್ ಉಚಿತ ವಿದ್ಯುತ್ ಪಡೆಯುವ ಗೃಹ ಜ್ಯೋತಿ ಯೋಜನೆಗೆ ನೋಂದಣಿ ಪ್ರಕ್ರಿಯೆ ನಿನ್ನೆಯ ದಿನಕ್ಕೆ ಬೆಸ್ಕಾಂನಲ್ಲಿ ೩೪ ಲಕ್ಷ ಗ್ರಾಹಕರು ಯೋಜನೆಗೆ ತಮ್ಮ ಹೆಸರನ್ನು ನೋಂದಾಯಿಸಿದ್ದಾರೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಸುಗಮವಾಗಿ ನಡೆದಿದೆ ಎಂದು ಬೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಯೋಜನೆಯ ನೋಂದಣಿ ಪ್ರಕ್ರಿಯೆಯು ತುಂಬಾ ಸರಳವಾಗಿದೆ ಮತ್ತು ಗ್ರಾಹಕರು ಯಾವುದೇ ದಾಖಲೆಗಳನ್ನು ಒದಗಿಸುವ ಅಗತ್ಯವಿಲ್ಲ. ನೋಂದಣಿ ಮಾಡಲು ವಿದ್ಯುತ್ ಬಿಲ್‌ನಲ್ಲಿ ಖಾತೆ ಸಂಖ್ಯೆ, ಗ್ರಾಹಕರ ಆಧಾರ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಿದರೆ ಸಾಕು.
ನೋಂದಣಿ ಪ್ರಕ್ರಿಯೆ ರಾಜ್ಯದ ಎಲ್ಲ ಕರ್ನಾಟಕ ಒನ್, ಗ್ರಾಮ ಒನ್ ಹಾಗು ಬೆಂಗಳೂರು ಒನ್ ಕೇಂದ್ರಗಳಲ್ಲಿ ನಡೆಯುತ್ತಿದೆ. ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಮೂಲಕ ನೋಂದಣಿ ಮಾಡಲಾಗುತ್ತಿದೆ.
ನೋಂದಣಿ ಪ್ರಕ್ರಿಯೆಗೆ ಯಾವುದೇ ಗಡುವು ಇಲ್ಲ. ಹಾಗಾಗಿ ಗ್ರಾಹಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Exit mobile version