ಉಡುಪಿಯಲ್ಲಿ ಶಕ್ತಿ ಯೋಜನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಚಾಲನೆ

0
21

ಉಡುಪಿ ಜಿಲ್ಲೆಯ ಬನ್ನಂಜೆ ಕೇಂದ್ರ ಬಸ್ ನಿಲ್ದಾಣದಲ್ಲಿ‌ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ “ಶಕ್ತಿ ಯೋಜನೆ”ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರದ ವತಿಯಿಂದ ರಾಜ್ಯಾದ್ಯಂತ ಮಹಿಳೆಯರಿಗೆ ನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಯೋಜನೆ ಇದಾಗಿದ್ದು, ಮಹಿಳೆಯರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯಲು 3 ತಿಂಗಳ ಕಾಲಾವಕಾಶವಿದ್ದು, ಸ್ಮಾರ್ಟ್ ಕಾರ್ಡ್ ಸಿಗುವವರೆಗೂ ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್ ಅಥವಾ ಚಾಲನಾ ಲೈಸೆನ್ಸ್ ತೋರಿಸಿ ಪ್ರಯಾಣಿಸಬಹುದಾಗಿದೆ‌. ಮುಂದಿನ ದಿನಗಳಲ್ಲಿ ಇನ್ನುಳಿದ ಯೋಜನೆಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಜನಪರ ಸರ್ಕಾರವೆಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಲಿದೆ, ನುಡಿದಂತೆ ನಡೆಯುವ ಸರ್ಕಾರವೆಂಬ ಹೆಗ್ಗಳಿಕೆಗೂ ಸಹ ಪಾತ್ರವಾಗಲಿದೆ ಎಂದರು.

Previous articleಬಸ್ ಚಾಲನೆ ಮಾಡಿ ಗಮನ ಸೆಳೆದ ಸಚಿವ
Next articleಹುಬ್ಬಳ್ಳಿ: ಕೆಲ ರೈಲುಗಳ ನಿಲುಗಡೆ ತಾತ್ಕಾಲಿಕ ರದ್ದು