ಉಪೇಂದ್ರಗೆ ಬಿಗ್ ರಿಲೀಫ್: ಮಧ್ಯಂತರ ತಡೆ ನೀಡಿದ ಹೈಕೋರ್ಟ್

0
30

ಬೆಂಗಳೂರು: ಒಂದೇ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಅನೇಕ ಎಫ್‌ಐಆರ್‌ಗಳನ್ನು ದಾಖಲಿಸಿರುವುದನ್ನು ಪ್ರಶ್ನಿಸಿ ನಟ-ನಿರ್ದೇಶಕ ಉಪೇಂದ್ರ ಎರಡನೇ ರಿಟ್ ಅರ್ಜಿಯೊಂದಿಗೆ ಮತ್ತೆ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ತಮ್ಮ ಮೇಲೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್.ಐ.ಆರ್ ರದ್ದುಗೊಳಿಸುವಂತೆ ನಟ ಉಪೇಂದ್ರ ಹೈಕೋರ್ಟ್ ಮೆಟ್ಟಿಲು ಏರಿದ್ದರು. ಇತ್ತಿಚಿಗಷ್ಟೇ ಹೈಕೋರ್ಟ್ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಇಂದು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿ ಎಫ್‍.ಐ.ಆರ್‌ಗೂ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಏನಿದು ಪ್ರಕರಣ: ನಟ ಉಪೇಂದ್ರ ಅವರು ತಮ್ಮ ಪ್ರಜಾಕೀಯ ಪಕ್ಷದ ಆರನೇ ವರ್ಷದ ವಾರ್ಷಿಕೋತ್ಸವದ ಸಂದರ್ಭ ಇನ್​ಸ್ಟಾಗ್ರಾಂ, ಫೇಸ್​ಬುಕ್​ನ ಲೈವ್ ವಿಡಿಯೋದಲ್ಲಿ ಮಾತನಾಡುತ್ತಾ ಆಕ್ಷೇಪಾರ್ಹ ಶಬ್ದವನ್ನು ಬಳಕೆ ಮಾಡಿದ್ದರು, ಇದರ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಉಪೇಂದ್ರ ವಿರುದ್ಧ ಬೆಂಗಳೂರಿನ ಎರಡು ಪ್ರತ್ಯೇಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

Previous articleಕಾವೇರಿ ನೀರು: ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ
Next articleಅಧಿಕಾರಿ ದಂಪತಿ ಮೇಲೆ ಲೋಕಾ ದಾಳಿ