Home Advertisement
Home ತಾಜಾ ಸುದ್ದಿ ಎರಡನೇ ಪಟ್ಟಿಯಲ್ಲಿ ನನ್ನ ಹೆಸರು ಇರಲಿದೆ: ನಿಂಬಣ್ಣವರ ವಿಶ್ವಾಸ

ಎರಡನೇ ಪಟ್ಟಿಯಲ್ಲಿ ನನ್ನ ಹೆಸರು ಇರಲಿದೆ: ನಿಂಬಣ್ಣವರ ವಿಶ್ವಾಸ

0
111
ಕಲಘಟಗಿ ಶಾಸಕ ಸಿ.ಎಂ.ನಿಂಬಣ್ಣವರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು

ಹುಬ್ಬಳ್ಳಿ: ಬಿಜೆಪಿ ಮೊದಲ ಪಟ್ಟಿಯಲ್ಲಿಯೇ ನನ್ನ ಹೆಸರು ಪ್ರಕಟವಾಗಬೇಕಿತ್ತು. ಬಂದಿಲ್ಲ, ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ. ನಾನು ಆಶಾವಾದಿಯಾಗಿದ್ದೇನೆ. ಎರಡನೇ ಪಟ್ಟಿಯ ಪ್ರಕಟ ಎದುರು ನೋಡುತ್ತಿದ್ದೇನೆ ಎಂದು ಶಾಸಕ ಸಿ.ಎಂ ನಿಂಬಣ್ಣವರ ಹೇಳಿದರು.
ಮೊದಲ ಪಟ್ಟಿಯಲ್ಲಿ ತಮ್ಮ ಹೆಸರು ಪ್ರಕಟವಾಗದೇ ಇರುವ ಕುರಿತಂತ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಹಾಲಿ ಶಾಸಕ. ಪಕ್ಷಕ್ಕಾಗಿ ಕಳೆದ 30 ವರ್ಷಗಳಿಂದ ಕೆಲಸ ಮಾಡಿದ್ದೇನೆ. ಮತ್ತೊಂದು ಅವಧಿಗೆ ಶಾಸಕನಾಗಲು ಪಕ್ಷ ಅವಕಾಶ ಕೊಡುವ ವಿಶ್ವಾಸವಿದೆ. ಕಾದು ನೋಡುತ್ತೇನೆ ಎಂದರು.

Previous articleಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
Next articleನಟಿ ಶ್ರುತಿ ವಿರುದ್ದ ದೂರು ದಾಖಲು