Home ತಾಜಾ ಸುದ್ದಿ ಎಲ್ಲದಕ್ಕೂ ಗೋವು ಆಧಾರ

ಎಲ್ಲದಕ್ಕೂ ಗೋವು ಆಧಾರ

0

ಮಂಗಳೂರು: ಜನರ ಭಾವನೆಗಳಿಗೆ ವಿರುದ್ಧವಾದ ಕೆಲಸವನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರ ಮಾಡುತ್ತಿದೆ. ಹೀಗೆ ಮುಂದುವರೆದಲ್ಲಿ ಜಿಲ್ಲೆಯಲ್ಲಿ ಅಶಾಂತಿ ನಿರ್ಮಾಣವಾಗುವುದು ಖಂಡಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ ಕಟೀಲ್‌ ಹೇಳಿದ್ದಾರೆ.
ರಾಜ್ಯದಲ್ಲಿ ಗೋ ಹತ್ಯಾ ನಿಷೇಧ ಕಾಯ್ದೆ ವಾಪಸ್‌ ಕುರಿತು ನಗದಲ್ಲಿಂದು ಮಾತನಾಡಿದ ಅವರು, ಭಾರತದಲ್ಲಿ ಗೋ ಸಂಸ್ಕೃತಿ ಇದೆ. ಕೃಷಿ ಜೀವನ, ಆರಾಧನೆ ಎಲ್ಲದಕ್ಕೂ ಗೋವು ಆಧಾರವಾಗಿದೆ. ಆದರೆ, ಕೆಲ ಆಚರಣೆ ಸಂದರ್ಭದಲ್ಲಿ ಗೋ ಹತ್ಯೆ ಆಗುತ್ತಿದೆ. ಹೀಗಾಗಿ ಗೋವುಗಳ ರಕ್ಷಣೆಗಾಗಿ ಬಿಜೆಪಿ ಸರಕಾರ ಗೋ ಹತ್ಯೆ ನಿಷೇಧ ಕಾನೂನು ಜಾರಿ ಮಾಡಿತ್ತು. ಕಾನೂನು ಜಾರಿಯಲ್ಲಿರುವಾಗ ಗೋ ಕಳ್ಳತನ, ಗೋ ಹತ್ಯೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

Exit mobile version