ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪಾಸ್ ವಿತರಣೆ ಸಂಬಂಧ ಇಂದು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ನಾಲ್ಕು ನಿಗಮಗಳ ವ್ಯವಸ್ಥಾಪಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು ಸರ್ಕಾರಿ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದಿದ್ದಾರೆ, ಇಂದಿನ ಸಭೆಯಲ್ಲಿ ಸಾಧಕ ಬಾಧಕಗಳ ಬಗ್ಗೆ ಸಮಾಲೋಚನೆ ನಡೆಸಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಭೆಯ ವರದಿ ಸಲ್ಲಿಸುತ್ತೇವೆ. ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಜೊತೆ ನಿನ್ನೆ ಸಿಎಂ ಸಿದ್ದರಾಮಯ್ಯನವರು ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿಸಿದರು. ರಾಜ್ಯಾದ್ಯಂತ ಎಲ್ಲಾ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು, ಇದಕ್ಕೆ ಯಾವುದೇ ಷರತ್ತುಗಳಿಲ್ಲ ಮುಖ್ಯಮಂತ್ರಿಗಳು ಎಲ್ಲ ಕಾರ್ಯದರ್ಶಿಗಳು ಹಾಗೂ ಎಂಡಿಗಳ ಜೊತೆ ಮಾತುಕತೆ ನಡೆಸಿದ್ದೇನೆ. ಎಲ್ಲ ನಿಗಮಗಳು ಒಂದಷ್ಟು ಗೈಡ್ಲೈನ್ಸ್ ನೀಡಿದ್ದಾರೆ. ಅವೆಲ್ಲವನ್ನೂ ಸಚಿವ ಸಂಪುಟದಲ್ಲಿ ಇಟ್ಟು ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.