ಎಸ್‌ಡಿಪಿಐ, ಪಿಎಫ್‌ಐ ನಿಷೇಧಕ್ಕೆ ಮುತಾಲಿಕ ಆಗ್ರಹ

0
29
ಮುತಾಲಿಕ

ಧಾರವಾಡ: ಎಸ್‌ಡಿಪಿಐ ಹಾಗೂ ಪಿಎಫ್‌ಐ ಸದಸ್ಯರು ಸಮಾಜಘಾತಕ ಕಾರ್ಯಗಳಲ್ಲಿ ಪಾಲ್ಗೊಂಡಿರುವ ಬಗ್ಗೆ ಸಾಕ್ಷ್ಯಾಧಾರಗಳು ಲಭಿಸಿರುವ ಹಿನ್ನೆಲೆಯಲ್ಲಿ ಉಭಯ ಸಂಘಟನೆಗಳನ್ನು ಕೂಡಲೇ ನಿಷೇಧಿಸಬೇಕೆಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ ಆಗ್ರಹಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಲವು ವರ್ಷಗಳಿಂದ ಎಸ್‌ಡಿಪಿಐ ಹಾಗೂ ಪಿಎಫ್‌ಐ ಸಂಘಟನೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಲಾಗುತ್ತಿದೆ. ಆದರೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಮೀನಮೇಷ ಎಣಿಸುತ್ತಿವೆ. ಪಿಎಫ್‌ಐ ಮುಖಂಡರ ನಿವಾಸಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ನೆಟ್ಟಾರು ಹರ್ಷನ ಕೊಲೆ ಪ್ರಕರಣದಲ್ಲಿ ಈ ಸಂಘಟನೆಯವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು.
ಮುಂದಿನ ತಿಂಗಳು ಪಿಎಫ್‌ಐ ಹಾಗೂ ಎಸ್‌ಡಿಪಿಐ ಮುಖಂಡರ ಬಗ್ಗೆ ದಾಖಲೆ ಬಿಡುಗಡೆಗೊಳಿಸಿ ರಾಜ್ಯಾದ್ಯಂತ ಆಂದೋಲನ ಮಾಡಲಾಗುವುದು ಎಂದು ತಿಳಿಸಿದರು.

Previous article24 ಗಂಟೆಯೊಳಗೆ ಬಂಧಿತರನ್ನು ಬಿಡುಗಡೆ ಮಾಡಿ: ಎಸ್​ಡಿಪಿಐ ಎಚ್ಚರಿಕೆ
Next articleದೇಶಾದ್ಯಂತ 93 ಕಡೆ NIA ದಾಳಿ