ಎಸ್‌ಸಿ/ಎಸ್‌ಟಿಗೆ ಸೇರ್ಪಡೆಗೊಳಿಸಲು ಇತರೆ ಸಮುದಾಯಗಳ ಒತ್ತಾಯ, ಪರಿಶೀಲನೆ: ಸಿಎಂ

0
9
Bommai

ಬೆಂಗಳೂರು: ವಿವಿಧ ಸಮುದಾಯಗಳು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿಸುವಂತೆ ಒತ್ತಾಯ ಮಾಡುತ್ತಿದ್ದು, ಈ ಬಗ್ಗೆ ಹಿಂದುಳಿದ ವರ್ಗಗಳ ಆಯೋಗದ ತಜ್ಞರು ನೀಡುವ ಶಿಫಾರಸ್ಸುಗಳನ್ನು ಪರಿಶೀಲಿಸಿ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಎಲ್ಲರಿಗೂ ಆಕಾಂಕ್ಷೆಗಳು ಇದ್ದೆ ಇರುತ್ತದೆ. ಸರ್ಕಾರ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಿ ಕಾನೂನಾತ್ಮಕವಾಗಿ ರಕ್ಷಣೆ ಕೊಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಹಿಂದುಳಿದ ವರ್ಗಗಳ ಆಯೋಗದ ತಜ್ಞರೊಡನೆ ಸಮಾಲೋಚಿಸಲಾಗುವುದು ಎಂದರು.

Previous article2023ರ ಚುನಾವಣೆಯಲ್ಲಿ ಬಿಜೆಪಿ ವಿಜಯಶಾಲಿ: ಬೊಮ್ಮಾಯಿ ವಿಶ್ವಾಸ
Next articleಪಂಡಿತ ಸವಾಯಿ ಗಂಧರ್ವರ ಅಂಚೆ ಚೀಟಿ ಬಿಡುಗಡೆ