Home Advertisement
Home ತಾಜಾ ಸುದ್ದಿ ಎಸ್.ಎಂ ಕೃಷ್ಣ ಆರೋಗ್ಯವಾಗಿದ್ದಾರೆ: ಸಿಎಂ

ಎಸ್.ಎಂ ಕೃಷ್ಣ ಆರೋಗ್ಯವಾಗಿದ್ದಾರೆ: ಸಿಎಂ

0
156
ಎಸ್.ಎಂ ಕೃಷ್ಣ

ಬೆಂಗಳೂರು: ರಾಜ್ಯದ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಆರೋಗ್ಯ ಚೇತರಿಕೆಯಾಗಿದೆ. ಎರಡು, ‌ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಅವರು ಮನೆಗೆ ತೆರಳಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದರು.
ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ, ಹಿರಿಯ ನಾಯಕ ಎಸ್.ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದ ಹಿರಿಯ ನಾಯಕ ಎಸ್.ಎಂ ಕೃಷ್ಣ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿಂದ ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗಿದೆ. ನಿರಂತರ ಚಿಕಿತ್ಸೆಯಿಂದ ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಎರಡು ಮೂರು ದಿನಗಳಲ್ಲಿ ಅವರು ಡಿಸ್ಚಾರ್ಜ್ ಆಗುತ್ತಾರೆ. ರಾಜ್ಯದ ಜನರು ಯಾವುದೇ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದರು.