ಒಂದೇ ಕುಟುಂಬದ ಮೂವರ ಅನುಮಾನಾಸ್ಪದ ಸಾವು

0
19

ಕೊಪ್ಪಳ: ಬಾಡಿಗೆ ಮನೆಯಲ್ಲಿ ವಾಸವಿದ್ದ ತಾಯಿ, ಮಗಳು, ಮೊಮ್ಮಗ ಸೇರಿ ಮೂವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.
ತಾಲೂಕಿನ ಹೊಸ ಲಿಂಗಾಪುರ ಗ್ರಾಮದ ಆಶ್ರಯ ಕಾಲೊನಿಯ ಮೂರನೇ ವಾರ್ಡಿನಲ್ಲಿ ಒಂದೇ ಕುಟುಂಬದ ಮೂವರು ಶಂಕಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆಲ್ಲಿ ಬೆಳಕಿಗೆ ಬಂದಿದೆ. ಬಾಡಿಗೆ ಮನೆಯಲ್ಲಿ ವಾಸವಿದ್ದ ರಾಜೇಶ್ವರಿ( 50) ವಸಂತ (28) ಮತ್ತು ವಸಂತ ಅವರ 5 ಮಗ ವರ್ಷದ ಸಾಯಿತೇಜ ಮೃತಪಟ್ಟವರು. ಮನೆಯ ಬಾಗಿಲು ತೆರೆದ ಸ್ಥಿತಿಯಲ್ಲಿ ಇರುವುದನ್ನು ಕಂಡು ಆಸುಪಾಸಿನ ಜನ ಮಂಗಳವಾರ ಬೆಳಿಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿ ಅನುಮಾನಾಸ್ಪದ ಸಾವಿನ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ.

Previous articleಕೆಲಸ ಕೊಡಿಸುವುದಾಗಿ ನಂಬಿಸಿ ವಿದೇಶಕ್ಕೆ ಕಳ್ಳಸಾಗಾಟ: ದೇಶಾದ್ಯಂತ NIA ರೇಡ್‌
Next articleಪತ್ನಿಯನ್ನು ಕೊಂದು ನೇಣಿಗೆ ಶರಣಾದ ಪತಿ