ಓಲೇಕಾರ ವಿರುದ್ಧ ಬೃಹತ್ ಪ್ರತಿಭಟನೆ

0
25

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಶಾಸಕ ನೆಹರು ಓಲೇಕಾರ ವಿರುದ್ಧ ವೀರಶೈವ ಮಹಾಸಭಾ ಹಾಗೂ ಬೊಮ್ಮಾಯಿ‌ ಅಭಿಮಾನಿಗಳಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಹಾವೇರಿಯ ತಮ್ಮ ನಿವಾಸದಲ್ಲಿ ಬೆಂಬಲಿಗರ ಸಭೆಯಲ್ಲಿ ಓಲೇಕಾರ ಸಿಎಂ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದರು. ಈ ವಿಡಿಯೋ ವೈರಲ್ ಆಗಿತ್ತು. ಅಭಿಮಾನಿಗಳಿಂದ ಆಕ್ರೋಶ ವ್ಯಕ್ತವಾಗಿತ್ತು.
ಈ ಹಿನ್ನೆಲೆಯಲ್ಲಿ ವೀರಶೈವ ಮಹಾಸಭಾ ಸದಸ್ಯರು, ಕಾಂಗ್ರೆಸ್, ಬಿಜೆಪಿ ಮುಖಂಡರು, ಬೊಮ್ಮಾಯಿ‌ ಅಭಿಮಾನಿಗಳು ನಗರದ ಪುರ ಸಿದ್ದೇಶ್ವರ ದೇವಸ್ಥಾನದಿಂದ ಪ್ರತಿಭಟನಾ ರ್ಯಾಲಿ ಆರಂಭಿಸಿದರು. ಎಂಜಿ ವೃತ್ತದ ಮೂಲಕ ಹೊಸಮನಿ‌ ಸಿದ್ದಪ್ಪ ವೃತ್ತಕ್ಕೆ ತೆರಳಿ ಪ್ರತಿಭಟಿಸಿದರು. ಓಲೇಕಾರ ವಿರುದ್ಧ ಘೋಷಣೆ ಕೂಗಿದರು.

Previous articleನನ್ನ ವಿರುದ್ಧ ಹೇಳಿಕೆ ನೀಡಲು ಯಡಿಯೂರಪ್ಪ ಮೇಲೆ ಒತ್ತಡ
Next articleಶೆಟ್ಟರ್ ಅಂತಹ‌ ದೊಡ್ಡ ನಾಯಕರ ಅವಶ್ಯಕತೆ ನಮಗಿಲ್ಲ